ADVERTISEMENT

ಬೀದರ್‌: ಸಿದ್ದರಾಮಯ್ಯ ಬೆಂಬಲಿಸಿ ಕುರುಬರಿಂದ ಪ್ರತಿಭಟನೆ

ಸಿಎಂ ವಿರುದ್ಧ ರಾಜ್ಯಪಾಲರ ಕ್ರಮ ರಾಜಕೀಯ ಪ್ರೇರಿತ, ಆರೋಪ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 15:44 IST
Last Updated 27 ಆಗಸ್ಟ್ 2024, 15:44 IST
ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘ ಹಾಗೂ ಕುರುಬ ಸಮಾಜದವರು ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು : ಪ್ರಜಾವಾಣಿ ಚಿತ್ರ
ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘ ಹಾಗೂ ಕುರುಬ ಸಮಾಜದವರು ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು : ಪ್ರಜಾವಾಣಿ ಚಿತ್ರ   

ಬೀದರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘ ಹಾಗೂ ಕುರುಬ ಸಮಾಜದವರು ನಗರದಲ್ಲಿ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು.

ನಗರದ ಬೊಮ್ಮಗೊಂಡೇಶ್ವರ ವೃತ್ತದಿಂದ ಬಸವೇಶ್ವರ ವೃತ್ತ, ಭಗತ್‌ ಸಿಂಗ್‌ ವೃತ್ತದ ಮೂಲಕ ಹಾದು ಜಿಲ್ಲಾಧಿಕಾರಿ ಕಚೇರಿವರೆಗೆ ರ್‍ಯಾಲಿ ನಡೆಸಿದರು. ಮಾರ್ಗದುದ್ದಕ್ಕೂ ಸಿದ್ದರಾಮಯ್ಯನವರ ಪರ, ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ವಿರುದ್ಧ ಘೋಷಣೆಗಳನ್ನು ಹಾಕಿದರು.

ರಾಷ್ಟ್ರಪತಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ADVERTISEMENT

ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂಬ ಕೇಂದ್ರ ಸರ್ಕಾರದ ಹುನ್ನಾರವಿದ್ದು, ಅದರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಜನಪರ ಸರ್ಕಾರದ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯಪಾಲರ ಕ್ರಮ ಸಂಪೂರ್ಣ ಅಸಾಂವಿಧಾನಿಕವಾದುದು. ರಾಜ್ಯಪಾಲರಿಗೆ ಸೂಚನೆ ಕೊಟ್ಟು, ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವ ಅನುಮತಿ ಹಿಂಪಡೆಯಲು ತಾಕೀತು ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ್‌ ಜೋಳದಾಪಕೆ, ಕುರುಬ ಸಮಾಜದ ಮುಖಂಡರಾದ ಪಂಡಿತರಾವ್ ಚಿದ್ರಿ, ಮಾಳಪ್ಪ ಅಡಸಾರೆ, ಚಂದ್ರಕಾಂತ ಮೇತ್ರೆ, ನರಸಿಂಗ್ ಚಂದಾಪುರೆ, ಭೀಮಸಿಂಗ್ ಮಲ್ಕಾಪುರ, ಎಂ.ಎಸ್. ಕಟಗಿ, ಎಂ.ಎಸ್. ಇಟಕಂಪಳ್ಳಿ, ರಘುನಾಥ ಭುರೆ, ಬಾಬುರಾವ್ ಸಂಗೋಳಗಿ, ರಮೇಶ ಜನವಾಡ, ವಿಠ್ಠಲ ರಾಜಗೀರಾ, ಹಣಮಂತ ಪಂಚಭಾಯಿ, ನಾಗೇಶ ಜಾನಕನೋರ, ಪಂಡಿತ ಬಾವಗಿ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.