ಕೊಳಾರ (ಕೆ) (ಜನವಾಡ): ಬೀದರ್ ತಾಲ್ಲೂಕಿನ ಕೊಳಾರ(ಕೆ) ಕೈಗಾರಿಕಾ ಪ್ರದೇಶದ ಸಾಯಿ ಲೈಫ್ ಸೈನ್ಸ್ ಕಂಪನಿಯಲ್ಲಿ ಕರ್ತವ್ಯ ನಿರ್ವಹಣೆ ವೇಳೆ ಕಾರ್ಮಿಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕಂಪನಿಯ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಘಟಕದ ಮುಖ್ಯಸ್ಥ ಹಾಗೂ ಸಂಬಂಧಪಟ್ಟ ಮೇಲ್ವಿಚಾರಕರ ವಿರುದ್ಧ ಬೀದರ್‌ನ ನ್ಯೂ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಂಪನಿಯ ಕಾರ್ಮಿಕರಾಗಿದ್ದ ಅಲಿಯಂಬರ್ ಗ್ರಾಮದ ದೇವರಾಜ ಸುನೀಲ್ ದೊಡ್ಡಮನಿ ಅವರು ಸೆ.24 ರಂದು ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಮೃತಪಟ್ಟಿದ್ದರು. ತಮ್ಮ ಮಗ ಅನಾರೋಗ್ಯದಿಂದ ಬಳಲುತ್ತಿದ್ದರೂ ಕಂಪನಿಯವರು ಕೆಲಸಕ್ಕೆ ಕರೆಸಿಕೊಂಡಿದ್ದರು. ಚಿಕಿತ್ಸೆ ಕೊಡಿಸದೆ, ನಿರ್ಲಕ್ಷ್ಯ ತೋರಿದ್ದರು ಎಂದು ಮೃತರ ತಂದೆ ಠಾಣೆಗೆ ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.