ಗುರಯ್ಯ ಬಂಡಯ್ಯ ಸ್ವಾಮಿ
ಔರಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ಕೊಳ್ಳೂರ್ ಗ್ರಾಮದಲ್ಲಿ ಜಮೀನು ವಿವಾದ ಸಂಬಂಧ ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಗುರಯ್ಯ ಬಂಡಯ್ಯ ಸ್ವಾಮಿ (38) ಕೊಲೆಗೀಡಾದ ವ್ಯಕ್ತಿ. ಸಹೋದರ ಸಂಬಂಧಿ ಕಲ್ಲಯ್ಯ ಸ್ವಾಮಿ ಹಾಗೂ ಇವರ ಅಪ್ರಾಪ್ತ ವಯಸ್ಸಿನ ಮಗ ಕೊಲೆ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಕೊಳ್ಳೂರ್ ಗ್ರಾಮದಲ್ಲಿ ಶನಿವಾರ ಸಂಜೆ ಹೊತ್ತು ಜಗಳ ಮಾಡಿಕೊಂಡ ಈ ಸೋದರ ಸಂಬಂಧಿಗಳು ಗುರಯ್ಯ ಸ್ವಾಮಿಯನ್ನು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಸ್ಥಳದಲ್ಲಿದ್ದವರು ಅವರನ್ನು ಔರಾದ್ ಸಾರ್ವಜನಿಕ ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.