
ಪ್ರಜಾವಾಣಿ ವಾರ್ತೆ
ಬೀದರ್: ಔರಾದ್ ಶಾಸಕ ಪ್ರಭು ಚವಾಣ್ ಅವರು ಸರ್ಕಾರಿ ಜಮೀನು ಕಬಳಿಸಿದ್ದಾರೆ ಎಂಬ ಆರೋಪದ ಪ್ರಕರಣ ಸಂಬಂಧ ವರದಿ ಸಲ್ಲಿಸಬೇಕು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.
ಔರಾದ್ ಮುಖಂಡ ದೀಪಕ್ ಪಾಟೀಲ ಚಾಂದೋರಿ ಹೂಡಿರುವ ದಾವೆಯ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಡಿ.1ರಂದು ಬೀದರ್ ಜಿಲ್ಲಾಧಿಕಾರಿಗೆ ಮರು ನಿರ್ದೇಶನ ನೀಡಿದೆ.
ಬೀದರ್ ತಾಲ್ಲೂಕಿನ ಕೊಳಾರ (ಬಿ) ಗ್ರಾಮದ ಸರ್ವೆ ಸಂಖ್ಯೆ 102/*/* ಹುಲ್ಲುಗಾವಲು ಅಥವಾ ‘ಬಿ’ ಖರಾಬ್ ಜಮೀನು ಎಂಬ ಆರೋಪಗಳ ಬಗ್ಗೆ ವರದಿ ಸಲ್ಲಿಕೆಗೆ ಸೂಚಿಸಿದೆ.
‘ಔರಾದ್ ಶಾಸಕರು 3 ಎಕರೆ ಸರ್ಕಾರಿ ಜಮೀನು ಅತಿಕ್ರಮಣ ಮಾಡಿಕೊಂಡಿದ್ದಾರೆ’ ಎಂದು ದೂರುದಾರರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.