ADVERTISEMENT

ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2025, 15:34 IST
Last Updated 20 ಜನವರಿ 2025, 15:34 IST
ಬೀದರ್ ತಾಲ್ಲೂಕಿನ ಔರಾದ್ (ಎಸ್) ಗ್ರಾಮದಲ್ಲಿ ಸೋಮವಾರ ನಡೆದ ಪೋಡಿ ಮುಕ್ತ ಗ್ರಾಮ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿದರು
ಬೀದರ್ ತಾಲ್ಲೂಕಿನ ಔರಾದ್ (ಎಸ್) ಗ್ರಾಮದಲ್ಲಿ ಸೋಮವಾರ ನಡೆದ ಪೋಡಿ ಮುಕ್ತ ಗ್ರಾಮ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿದರು   

ಔರಾದ್(ಎಸ್) (ಜನವಾಡ): ಬೀದರ್ ತಾಲ್ಲೂಕಿನ ಔರಾದ್(ಎಸ್) ಗ್ರಾಮದಲ್ಲಿ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಸೋಮವಾರ ಚಾಲನೆ ನೀಡಿದರು.

ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು.

ಅರ್ಜಿ ಸಲ್ಲಿಸದಿದ್ದರೂ, ಗ್ರಾಮಗಳ ಎಲ್ಲ ಆಸ್ತಿಗಳ ಭೂ ಮಾಪನ ಮಾಡಿ ಪೋಡಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ಗ್ರಾಮಕ್ಕೆ ನಾಲ್ವರು ಭೂ ಮಾಪಕರನ್ನು ನಿಯೋಜಿಸಲಾಗಿದೆ. ಭೂ ದಾಖಲೆಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ADVERTISEMENT

ಸಾರ್ವಜನಿಕರು ಅಭಿಯಾನದ ಪ್ರಯೋಜನ ಪಡೆದು ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.

ಎನ್.ಬಿ.ರೆಡ್ಡಿ ಗುರೂಜಿ, ತಹಶೀಲ್ದಾರ್ ಡಿ.ಜಿ.ಮಹಾತ್, ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟರೆಡ್ಡಿ ಪೋಗಲ್, ಪ್ರಮುಖರಾದ ಗುರುನಾಥ ರಾಜಗೀರಾ, ರಾಜರೆಡ್ಡಿ ಶಹಾಬಾದ್, ಸುರೇಶ ಮಾಶೆಟ್ಟಿ, ಸೂರ್ಯಕಾಂತ ಸೇಡಂ ಹಾಗೂ ನರಸಿಂಹರೆಡ್ಡಿ ಗಂಗ್ವಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.