ADVERTISEMENT

ಬೀದರ್| ಮಹಿಳಾ ಶೋಷಣೆ ತಡೆ ಕಾನೂನು ಸುಧಾರಣೆ ಅಗತ್ಯ: ಬಿ.ಎಸ್. ಬಿರಾದಾರ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 15:56 IST
Last Updated 26 ಮಾರ್ಚ್ 2023, 15:56 IST
ಬೀದರ್‌ನ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಉದ್ಘಾಟಿಸಿದರು
ಬೀದರ್‌ನ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಉದ್ಘಾಟಿಸಿದರು   

ಮಹಿಳಾ ಶೋಷಣೆ ತಡೆ ಕಾನೂನಿನಲ್ಲಿ ಇನ್ನಷ್ಟು ಸುಧಾರಣೆ ತರುವ ಅಗತ್ಯವಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಅಭಿಪ್ರಾಯಪಟ್ಟರು.

ಇಲ್ಲಿಯ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಸಭಾಂಗಣದಲ್ಲಿ ಅಕ್ಕ ಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘ, ಡಾ. ಎಸ್.ಎಸ್. ಸಿದ್ದಾರೆಡ್ಡಿ ಫೌಂಡೇಷನ್ ಹಾಗೂ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಶೋಷಣೆ ಶೂನ್ಯವಾದಲ್ಲಿ ಭಾರತ ವಿಶ್ವ ಗುರುವಿನ ಸ್ಥಾನದಲ್ಲಿ ಗುರುತಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ. ಮೂಲಿಮನಿ, ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಉಪಾಧ್ಯಕ್ಷೆ ರೇಷ್ಮಾ ಕೌರ್, ಸುವರ್ಣಾ ಚಿಮಕೋಡೆ, ಡಾ. ಪಲ್ಲವಿ ಕೇಸರಿ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಮಾತನಾಡಿದರು.

ADVERTISEMENT

ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸಾವಿತ್ರಿಬಾಯಿ ಹೆಬ್ಬಾಳೆ ಅಧ್ಯಕ್ಷತೆ ವಹಿಸಿದ್ದರು. ಪುಣ್ಯವತಿ ವಿಸಾಜಿ, ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಗಡ್ಡೆ, ಚಂದ್ರಶೇಖರ ಹೆಬ್ಬಾಳೆ, ವೀರಶೆಟ್ಟಿ ಮಣಗೆ, ವೈಜಿನಾಥ ಕಮಠಾಣೆ, ರಾಮಕೃಷ್ಣ ಸಾಳೆ, ರಾಜಕುಮಾರ ಹೆಬ್ಬಾಳೆ, ನಿಜಲಿಂಗಪ್ಪ ತಗಾರೆ ಇದ್ದರು.

ಮಲ್ಲಮ್ಮ ಸಂತಾಜಿ ಸ್ವಾಗತಿಸಿದರು. ಸುನಿತಾ ಕೂಡ್ಲಿಕರ್ ನಿರೂಪಿಸಿದರು. ಸವಿತಾ ಸಾಕುಳೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.