ADVERTISEMENT

ಜನವಾಡ: ‘ಪ್ರತಿಯೊಬ್ಬರೂ ಕಾನೂನು ಪಾಲಿಸಿ’

ಕಾನೂನು ಅರಿವು–ನೆರವು ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 6:13 IST
Last Updated 3 ಅಕ್ಟೋಬರ್ 2021, 6:13 IST
ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದಲ್ಲಿ ಕಾನೂನು ಅರಿವು-–ನೆರವು ಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಾಡ್ಲೂರು ಸತ್ಯನಾರಾಯಣಾಚಾರ್ಯ ಚಾಲನೆ ನೀಡಿದರು
ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದಲ್ಲಿ ಕಾನೂನು ಅರಿವು-–ನೆರವು ಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಾಡ್ಲೂರು ಸತ್ಯನಾರಾಯಣಾಚಾರ್ಯ ಚಾಲನೆ ನೀಡಿದರು   

ಜನವಾಡ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ 25ನೇ ವರ್ಷಾಚರಣೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಕಾನೂನು ಅರಿವು-ನೆರವು ಕಾರ್ಯಕ್ರಮವು ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದಲ್ಲಿ ಶನಿವಾರ ಆರಂಭಗೊಂಡಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಾಡ್ಲೂರು ಸತ್ಯನಾರಾಯಣಾಚಾರ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನವೆಂಬರ್ 14 ರವರೆಗೆ ಜಿಲ್ಲೆಯ ಎಲ್ಲ 185 ಗ್ರಾಮ ಪಂಚಾಯಿತಿಗಳಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ADVERTISEMENT

ಪ್ರತಿಯೊಬ್ಬರೂ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ಕಾನೂನುಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮಾತನಾಡಿ, ಸರ್ಕಾರದ ನಿಯಮಗಳ ಪಾಲನೆ ಕೂಡ ಕಾನೂನು ಪಾಲಿಸಿದಂತೆ ಎಂದು ತಿಳಿಸಿದರು. ದ್ವಿಚಕ್ರ ವಾಹನ ಸವಾರರು ಹೆಲ್ಮೇಟ್ ಧರಿಸಬೇಕು. ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ರಸ್ತೆ ನಿಯಮಗಳನ್ನು ಅನುಸರಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಝರೀನಾ, ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ರಾಮ ಟಿ.ಪಿ, ಐಎಎಸ್ ಪ್ರೊಬೆಷನರಿ ಅಧಿಕಾರಿ ಕೀರ್ತನಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ಮಾನೂರೆ, ಸಂಗೋಳಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫರ್ಜಾನಾ ಬೇಗಂ, ಉಪಾಧ್ಯಕ್ಷೆ ಮುನ್ನಾಬಾಯಿ, ಪಿಕೆಪಿಎಸ್ ಅಧ್ಯಕ್ಷ ಅನಿಲಕುಮಾರ ಹಜ್ಜರಗಿ ಇದ್ದರು. ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲೆಯಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮಗಳು ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.