ADVERTISEMENT

ಜನ ಸೇವೆಗೆ ಮತ್ತೆ ಅವಕಾಶ ಕೊಡಿ

ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಅಶೋಕ ಖೇಣಿ ಮನವಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 13:59 IST
Last Updated 23 ಫೆಬ್ರುವರಿ 2021, 13:59 IST
ಬೀದರ್‌ನಲ್ಲಿ ಮಂಗಳವಾರ ಮಾಜಿ ಶಾಸಕ ಅಶೋಕ ಖೇಣಿ ಅವರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸನ್ಮಾನಿಸಿದರು
ಬೀದರ್‌ನಲ್ಲಿ ಮಂಗಳವಾರ ಮಾಜಿ ಶಾಸಕ ಅಶೋಕ ಖೇಣಿ ಅವರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸನ್ಮಾನಿಸಿದರು   

ಬೀದರ್: ಶಾಸಕನಾಗಿದ್ದ ಅವಧಿಯಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ರೂ. 2,200 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಇನ್ನೂ ಹೆಚ್ಚಿನ ಸೇವೆಗೆ ಕ್ಷೇತ್ರದ ಜನ ಮತ್ತೆ ಅವಕಾಶ ಕಲ್ಪಿಸಬೇಕು ಎಂದು ಮಾಜಿ ಶಾಸಕ ಅಶೋಕ ಖೇಣಿ ಮನವಿ ಮಾಡಿದರು.

ಬೀದರ್‍ನ ರಾಂಪುರೆ ಕಾಲೊನಿಯಲ್ಲಿ ಇರುವ ತಮ್ಮ ನಿವಾಸದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಕಾರ್ಯಕರ್ತರು ಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಶ್ರಮಿಸಬೇಕು ಎಂದು ಹೇಳಿದರು.

ADVERTISEMENT

ವಾರದ ಕಾಲ ಬೀದರ್ ದಕ್ಷಿಣ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜನರ ಅಹವಾಲು ಆಲಿಸಲಿದ್ದೇನೆ ಎಂದು ಹೇಳಿದರು.
ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ, ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಕರೀಂಸಾಬ್, ಎಪಿಎಂಸಿ ನಿರ್ದೇಶಕ ಶಿವಶರಣಯ್ಯ ಸ್ವಾಮಿ, ಮುಖಂಡ ಅಜ್ಮತ್ ಅಲ್ಲೂರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.