ADVERTISEMENT

ಬೀದರ್: ವಿದ್ಯಾರ್ಥಿಗಳು ಉತ್ತಮ ನಡತೆ ರೂಢಿಸಿಕೊಳ್ಳಲಿ

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 7:09 IST
Last Updated 5 ಫೆಬ್ರುವರಿ 2023, 7:09 IST
ಬೀದರ್‌ನ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಉದ್ಯಮಶೀಲತೆ ಕೌಶಲದ ವರ್ತನೆ ಹಾಗೂ ನಡವಳಿಕೆ ಅಭಿವೃದ್ಧಿ ಕಾರ್ಯಾಗಾರದಲ್ಲಿ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಉದ್ಯಮಶೀಲತೆ ಕೌಶಲದ ವರ್ತನೆ ಹಾಗೂ ನಡವಳಿಕೆ ಅಭಿವೃದ್ಧಿ ಕಾರ್ಯಾಗಾರದಲ್ಲಿ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಅವರನ್ನು ಸನ್ಮಾನಿಸಲಾಯಿತು   

ಬೀದರ್: ವಿದ್ಯಾರ್ಥಿಗಳು ಉತ್ತಮ ವರ್ತನೆ ಹಾಗೂ ನಡವಳಿಕೆಯನ್ನು ರೂಢಿಸಿಕೊಳ್ಳಬೇಕು ಎಂದು ಸಂಪನ್ಮೂಲ ವ್ಯಕ್ತಿ ಸಿದ್ಧರಾಜ ಪಾಟೀಲ ಹೇಳಿದರು.

ನಗರದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯಮಶೀಲತೆ ಕೌಶಲದ ವರ್ತನೆ ಹಾಗೂ ನಡವಳಿಕೆ ಅಭಿವೃದ್ಧಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.

ಕಾರ್ಯಾಗಾರವನ್ನು ಉದ್ಘಾಟಿಸಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಮಾತನಾಡಿ, ಯುವಕರು ಸ್ವಾಮಿ ವಿವೇಕಾನಂದರ ತತ್ವಗಳನ್ನು ಪಾಲಿಸಬೇಕು. ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.
ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ ಮಾತನಾಡಿ, ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ, ಡಾ. ದಾಕ್ಷಾಯಣಿ ತಾಯಿ, ಚಿ. ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ನಿರ್ದೇಶಕ ಶರಣಬಸಪ್ಪ ದೇಶಮುಖ ಅವರ ಪ್ರೇರಣೆಯಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ವಿವಿಧ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಶರಣಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಸತಿ ಕಾಲೇಜು ಪ್ರಾಚಾರ್ಯ ಡಾ. ಸತೀಶ ಪ್ರತಾಪುರ ಉಪಸ್ಥಿತರಿದ್ದರು. ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.