ADVERTISEMENT

‘ಬಾಲಕಾರ್ಮಿಕ ಪದ್ಧತಿ ವಿರುದ್ಧ ಒಂದಾಗೋಣ’

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:40 IST
Last Updated 18 ಜೂನ್ 2025, 15:40 IST
ಹುಮನಾಬಾದ್ ಪಟ್ಟಣದಲ್ಲಿ ನಡೆದ ಬಾಲಕಾರ್ಮಿಕ ವಿರೋಧಿ ದಿನಾಚರಣೆಗೆ ಗಣ್ಯರು ಚಾಲನೆ ನೀಡಿದರು
ಹುಮನಾಬಾದ್ ಪಟ್ಟಣದಲ್ಲಿ ನಡೆದ ಬಾಲಕಾರ್ಮಿಕ ವಿರೋಧಿ ದಿನಾಚರಣೆಗೆ ಗಣ್ಯರು ಚಾಲನೆ ನೀಡಿದರು   

ಹುಮನಾಬಾದ್: ‘ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಅಧಿಕಾರಿಗಳು, ಪೋಷಕರು ಒಗ್ಗೂಡಬೇಕಿದೆ’ ಎಂದು ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ಬಾದವಾಡಗಿ ತಿಳಿಸಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಕ್ಕಳು ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಂಡು ಶಿಕ್ಷಣದಿಂದ ವಂಚಿತರಾಗಿದ್ದಲ್ಲಿ ಕಾರ್ಮಿಕ, ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು’ ಎಂದು ಹೇಳಿದರು.

ADVERTISEMENT

ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಣ್ಣ ಹನುಮಗೌಡ ಪೊಲೀಸ್ ಪಾಟೀಲ ಮಾತನಾಡಿ, ‘ಪ್ರಾಥಮಿಕ ಶಿಕ್ಷಣವು ಮಗುವಿನ ಮೂಲಭೂತ ಹಕ್ಕಾಗಿದ್ದು, ಸಮಾಜದಲ್ಲಿನ ಯಾವುದೇ ಮಗುವು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದರು.

ತಹಶೀಲ್ದಾರ್ ಅಂಜುಂ ತಬಸುಮ್ ಮಾತನಾಡಿ, ಶಿಕ್ಷಣದ ಕೊರತೆಯಿಂದಾಗಿ ಬಾಲಕಾರ್ಮಿಕ ಪದ್ಧತಿ ಇನ್ನೂ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ, ಅರಿವಿನ ಕೊರತೆಯಿಂದಾಗಿಯೇ ಇಂತಹ ಪದ್ಧತಿಗಳು ಇಂದಿಗೂ ಜೀವಂತವಾಗಿವೆ. ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಅವರ ಶಿಕ್ಷಣ ಹಕ್ಕಿನಿಂದ ವಂಚಿಸಿ, ದುಡಿಮೆಗೆ ಬಳಸುವುದು ಕಾನೂನು ಪ್ರಕಾರ ಅಪರಾಧ. ಇದಕ್ಕಾಗಿ, ಮಕ್ಕಳನ್ನು ದುಡಿಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನಿನಡಿ ಶಿಕ್ಷೆ ವಿಧಿಸಲು ಅವಕಾಶವಿದೆ. ಎಲ್ಲೆಡೆ ಬಾಲ ಕಾರ್ಮಿಕ ಪದ್ಧತಿ ಅನುಸರಿಸುವವರ ವಿರುದ್ಧ ನಿಗಾ ಇಡಬೇಕಾಗಿದೆ’ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಗೂಡಾಳ್, ಕಾರ್ಮಿಕ ಅಧಿಕಾರಿ ಗಂಗಾಧರ್, ವಕೀಲರ ಸಂಘದ ಅಧ್ಯಕ್ಷ ಮಂಜುನಾಥ್ ರೆಡ್ಡಿ, ಉಪಾಧ್ಯಕ್ಷ ವಿಜಯಕುಮಾರ್ ಜೋತಗೊಂಡ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ನಾತೆ ಸೇರಿದಂತೆ ಇತರರು ಇದ್ದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.