ADVERTISEMENT

ಭಾಲ್ಕಿ: ಸಾಧನೆ ಇಲ್ಲದ ಬದುಕು ನಿರರ್ಥಕ

ಜೆಇಇ ಸಾಧಕರ ಸನ್ಮಾನ ಸಮಾರಂಭದಲ್ಲಿ ಡಿಡಿಪಿಯು ಶಹಾಬಾದಕರ್ ಅಭಿಮತ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2023, 6:48 IST
Last Updated 9 ಫೆಬ್ರುವರಿ 2023, 6:48 IST
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಜೆಇಇ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಿಡಿಪಿಯು ಚಂದ್ರಕಾಂತ ಶಹಾಬಾದಕರ್, ಗುರುಬಸವ ಪಟ್ಟದ್ದೇವರು ಇದ್ದರು
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಜೆಇಇ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಿಡಿಪಿಯು ಚಂದ್ರಕಾಂತ ಶಹಾಬಾದಕರ್, ಗುರುಬಸವ ಪಟ್ಟದ್ದೇವರು ಇದ್ದರು   

ಭಾಲ್ಕಿ: ‘ಸಾಧನೆ ಇಲ್ಲದ ಬದುಕಿಗೆ ಬೆಲೆಯಿಲ್ಲ ಎಂಬ ಸತ್ಯವನ್ನು ಅರಿತರೆ ಜೀವನಕ್ಕೊಂದು ಅರ್ಥ ಸಿಗುತ್ತದೆ’ ಎಂದು ಡಿಡಿಪಿಯು ಚಂದ್ರಕಾಂತ ಶಹಾಬಾದಕರ್ ಹೇಳಿದರು.

ತಾಲ್ಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಪಿಯು ಕಾಲೇಜಿನಲ್ಲಿ ಬುಧವಾರ ನಡೆದ ಜೆಇಇ ಮೇನ್ಸ್ ಸಾಧಕರ ಸನ್ಮಾನ ಸಮಾರಂ ಭದಲ್ಲಿ ಮಾತನಾಡಿದರು.

ಗುರುಕುಲದಲ್ಲಿ ಮೆಡಿಕಲ್ ಹೊರತಾಗಿಯು ವಿವಿಧ ಕೋರ್ಸ್‍ಗಳಿಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ ಎಲ್ಲ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರುತ್ತಿದ್ದಾರೆ ಎಂದರು.

ADVERTISEMENT

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ,‘ವಿದ್ಯಾರ್ಥಿ ಜೀವನದಲ್ಲಿ ನಿರಾಶೆ, ಖಿನ್ನತೆ, ಕೆಟ್ಟ ವಿಚಾರಗಳಿಗೆ ಎಂದೂ ಅವಕಾಶ ಕೊಡಬಾರದು. ಮುಂದೆ ಉನ್ನತ ಕೋ ರ್ಸ್‌ಗಳಿಗೆ ಹೋಗುವ ವಿದ್ಯಾ ರ್ಥಿಗಳು ಯಾವುದೇ ಕಾರಣಕ್ಕೂ ಚಾರಿತ್ರ್ಯ ಹಾಳು ಮಾಡಿಕೊಳ್ಳಬಾರದು. ಉತ್ತಮ ನಡೆ, ನುಡಿ ರೂಢಿಸಿಕೊಂಡು ಜೀವನ ಸುಂದರವಾಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಾಚಾರ್ಯ ಬಸವರಾಜ ಮೊಳಕೀರೆ ಮಾತನಾಡಿ,‘2022-23ನೇ ಸಾಲಿನ ಜೆಇಇ ಮೇನ್ಸ್ ಪರೀಕ್ಷೆ ಯಲ್ಲಿ 102 ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಎನ್‍ಐಟಿ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ. 19 ವಿದ್ಯಾರ್ಥಿಗಳು ಶೇ90 ಕ್ಕಿಂತ ಹೆಚ್ಚು ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದು ಕೊಟ್ಟಿದ್ದಾರೆ’ ಎಂದು ತಿಳಿಸಿದರು.ಆಡಳಿತಾಧಿಕಾರಿ ಮೋಹನ ರೆಡ್ಡಿ ಮಾತನಾಡಿದರು. ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ನಿರ್ದೇಶಕ ಶಶಿಧರ ಕೋಸಂಬೆ, ಪ್ರಾಚಾರ್ಯ ಶಿವರಾಜ ಭೂರಾಳೆ ಇದ್ದರು. ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.