ADVERTISEMENT

ಬಸವಕುಮಾರಗೆ ಲಿಂಗಾನಂದಶ್ರೀ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2023, 16:03 IST
Last Updated 12 ಸೆಪ್ಟೆಂಬರ್ 2023, 16:03 IST
ಬೆಳಗಾವಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಸವಕುಮಾರ ಪಾಟೀಲ ಅವರಿಗೆ ‘ಲಿಂಗಾನಂದಶ್ರೀ’  ಪ್ರಶಸ್ತಿ ಪ್ರದಾನ ಮಾಡಿದರು
ಬೆಳಗಾವಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಸವಕುಮಾರ ಪಾಟೀಲ ಅವರಿಗೆ ‘ಲಿಂಗಾನಂದಶ್ರೀ’  ಪ್ರಶಸ್ತಿ ಪ್ರದಾನ ಮಾಡಿದರು    

ಬೀದರ್‌: ಬಸವ ತತ್ವ ಪ್ರಚಾರ, ಪ್ರಸಾರಕ್ಕಾಗಿ ಅವಿರತ ಶ್ರಮಿಸಿದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಅವರಿಗೆ ಇತ್ತೀಚೆಗೆ ಬೆಳಗಾವಿ ಬೈಲೂರಿನ ನಿಷ್ಕಲ ಮಂಟಪದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಲಿಂಗಾನಂದಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಸವಕುಮಾರಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. 

‘ಬಸವಕುಮಾರ ಪಾಟೀಲ ಬಸವ ನಿಷ್ಠೆಗೆ ಹೆಸರಾಗಿದ್ದಾರೆ. ಲಿಂಗಾನಂದ ಸ್ವಾಮೀಜಿ ಹಾಗೂ ಮಾತೆ ಮಹಾದೇವಿ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಬಸವ ದಳವನ್ನು ತಳಮಟ್ಟದಲ್ಲಿ ವಿಸ್ತರಿಸಿದ ಹಿರಿಮೆ ಅವರದು. ಸಮಾಜ ಪರ ಚಿಂತಕರೂ ಆಗಿರುವ ಅವರು ಧಾರ್ಮಿಕ ಕಾರ್ಯಗಳ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದಾರೆ. 2010ರಿಂದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡುತ್ತಿದ್ದಾರೆ’ ಎಂದು ಬೈಲೂರು ನಿಷ್ಕಲ ಮಂಟಪ, ಮುಂಡರಗಿಯ ತೋಂಟದಾರ್ಯ ಮಠದ ಪೀಠಾಧಿಪತಿ ನಿಜಗುಣಾನಂದ ಸ್ವಾಮೀಜಿ ಹೇಳಿದರು.

ADVERTISEMENT

ಕಿತ್ತೂರು ಶಾಸಕ ಬಾಳಾಸಾಹೇಬ ಪಾಟೀಲ, ಚಿಕ್ಕಮಗಳೂರಿನ ಬಸವತತ್ವ ಪೀಠದ ಬಸವ ಮರುಳಸಿದ್ಧ ಸ್ವಾಮೀಜಿ, ಸಾಹಿತಿ ಎಸ್.ಆರ್. ಗುಂಜಾಳ್ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.