ಬೀದರ್: ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಆಯುಷ್ಯಾ ಅಹಮ್ಮದ್ ಖಾನ್ ಸಿವಿಲ್ ವಿಭಾಗದ ಆರನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ 5ನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಯಲ್ಲಿ 10ನೇ ರ್‍ಯಾಂಕ್ ಗಳಿಸುವ ಮೂಲಕ ಸಾಧನೆಗೈದಿದ್ದಾರೆ.
ಆಯುಷ್ಯಾ, ಕಲ್ಯಾಣ ಕರ್ನಾಟಕ ಭಾಗಕ್ಕೆ ಮೊದಲಿಗರಾಗಿದ್ದರೆ, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಸೌಮ್ಯಶ್ರೀ ದ್ವಿತೀಯ ಹಾಗೂ ಶಾಂತಮ್ಮ ತೃತೀಯ ಸ್ಥಾನದ ಗೌರವಕ್ಕೆ ಭಾಜನರಾಗಿದ್ದಾರೆ.
ಕಾಲೇಜು ವಿದ್ಯಾರ್ಥಿಗಳ ಸಾಧನೆಗೆ ಕಲಬುರ್ಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ, ಮಾತೋಶ್ರೀ ಡಾ. ದಾಕ್ಷಾಯಣಿ, ಕಾರ್ಯದರ್ಶಿ ಬಸವರಾಜ ದೇಶಮುಖ, ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ, ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ ಹಾಗೂ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.