ADVERTISEMENT

ಲಿಂಗರಾಜ ಅಪ್ಪ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 13:28 IST
Last Updated 15 ಅಕ್ಟೋಬರ್ 2021, 13:28 IST
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಯಲ್ಲಿ ಸಾಧನೆಗೈದ ಬೀದರ್‍ನ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳನ್ನು ಕಲಬುರ್ಗಿಯಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ ಹಾಗೂ ಮಾತೋಶ್ರೀ ಡಾ. ದಾಕ್ಷಾಯಣಿ ತಾಯಿ ಅವರು ಸನ್ಮಾನಿಸಿದರು
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಯಲ್ಲಿ ಸಾಧನೆಗೈದ ಬೀದರ್‍ನ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳನ್ನು ಕಲಬುರ್ಗಿಯಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ ಹಾಗೂ ಮಾತೋಶ್ರೀ ಡಾ. ದಾಕ್ಷಾಯಣಿ ತಾಯಿ ಅವರು ಸನ್ಮಾನಿಸಿದರು   

ಬೀದರ್: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಯಲ್ಲಿ ಸಾಧನೆಗೈದ ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ ಹಾಗೂ ಮಾತೋಶ್ರೀ ಡಾ. ದಾಕ್ಷಾಯಣಿ ತಾಯಿ ಅವರು ಸನ್ಮಾನಿಸಿದರು.

ಸಿವಿಲ್ ವಿಭಾಗದ ಆರನೇ ಸೆಮಿಸ್ಟರ್‍ನಲ್ಲಿ 7ನೇ ರ್ಯಾಂಕ್ ಹಾಗೂ ಐದನೇ ಸೆಮಿಸ್ಟರ್‍ನಲ್ಲಿ 10ನೇ ರ್ಯಾಂಕ್ ಗಳಿಸಿ ಕಲ್ಯಾಣ ಕರ್ನಾಟಕಕ್ಕೆ ಮೊದಲಿಗರಾಗಿ ಹೊರ ಹೊಮ್ಮಿದ ಆಯೇಷಾ ಅಹಮ್ಮದ್ ಖಾನ್, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ ಸೌಮ್ಯಶ್ರೀ ಪಾಂಚಾಳ ಹಾಗೂ ಶಾಂತಮ್ಮ ಕಣಜೆ ಅವರನ್ನು ಕಲಬುರ್ಗಿಯಲ್ಲಿ ಶಾಲು ಹೊದಿಸಿ ಸತ್ಕರಿಸಿದರು.

ಆಯೇಷಾಗೆ ₹. 11 ಸಾವಿರ, ಸೌಮ್ಯಶ್ರೀ ಮತ್ತು ಶಾಂತಮ್ಮಗೆ ತಲಾ ₹ 5 ಸಾವಿರ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ಸಿವಿಲ್ ವಿಭಾಗದ ಮುಖ್ಯಸ್ಥ ಕಿರಣ ಮೂಲಗೆ, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಸಂಗಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.