ADVERTISEMENT

ಆರೋಗ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮನೆ,‌ ಕಚೇರಿ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 5:13 IST
Last Updated 23 ಜುಲೈ 2025, 5:13 IST
<div class="paragraphs"><p>ಸುನೀಲ್ ಕುಮಾರ್ ಚಂದ್ರಪ್ರಕಾಶ್ ಪ್ರಭಾ</p></div>

ಸುನೀಲ್ ಕುಮಾರ್ ಚಂದ್ರಪ್ರಕಾಶ್ ಪ್ರಭಾ

   

ಬೀದರ್: ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇರೆಗೆ ಕಲಬುರಗಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸುನೀಲ್ ಕುಮಾರ್ ಚಂದ್ರಪ್ರಕಾಶ್‌ ಪ್ರಭಾ ಎಂಬುವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.

ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ (ಬಿ) ಗ್ರಾಮದ ನಿವಾಸಿಯಾಗಿರುವ ಸುನೀಲ್ ಕುಮಾರ್ ಸದ್ಯ ಕಲಬುರಗಿಯಲ್ಲಿ ಕೆಲಸ‌ ನಿರ್ವಹಿಸುತ್ತಿದ್ದಾರೆ.

ADVERTISEMENT

ಬೀದರ್ ನ ಜೈಲ್ ಕಾಲೊನಿಯ ಎಸ್.ಬಿ.ಪಿ. ನಗರದ ನಿವಾಸ ಹಾಗೂ ಕಲಬುರಗಿಯಲ್ಲಿ ಅವರು ಕೆಲಸ ನಿರ್ವಹಿಸುತ್ತಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿ ಸಂದರ್ಭದಲ್ಲಿ ಏನೇನು ಪತ್ತೆಯಾಗಿದೆ‌ ಎಂಬುದರ‌ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಲೋಕಾಯುಕ್ತ‌ ಎಸ್ಪಿ ಸಿದ್ದರಾಜು ಮಾರ್ಗದರ್ಶನ ಹಾಗೂ ಡಿವೈಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.