
ಪ್ರೇಮ್ ಸಿಂಗ್ ರಾಠೋಡ್
ಬೀದರ್: ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ (ಕೆಬಿಜೆಎನ್ಎಲ್) ಮುಖ್ಯ ಎಂಜಿನಿಯರ್ ಪ್ರೇಮ್ ಸಿಂಗ್ ರಾಠೋಡ್ ಎಂಬುವರ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಇಲ್ಲಿನ ಶಿವನಗರದ ನಿವಾಸ, ಬೀದರ್ ತಾಲ್ಲೂಕಿನ ಬಗದಲ್, ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಭೀಮರಾಯನಗುಡಿಯ ಮನೆ, ಕಚೇರಿಯಲ್ಲಿ ಏಕಕಾಲಕ್ಕೆ ತೆರಳಿ ಶೋಧ ಕೈಗೊಂಡಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ಶೋಧ ಕೈಗೊಳ್ಳಲಾಗಿದೆ. ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದ ನಿವಾಸಿಯಾಗಿರುವ ಪ್ರೇಮ್ ಸಿಂಗ್, ಎರಡು ವರ್ಷಗಳಿಂದ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.