
ಪ್ರಜಾವಾಣಿ ವಾರ್ತೆಹುಮನಾಬಾದ್ (ಬೀದರ್): ಇಲ್ಲಿನ ರಾಷ್ಟ್ರೀಯ ಹೆದ್ದಾರಿ 65ರ ಮೊಳಕೇರಾ ಗ್ರಾಮ ಸಮೀಪದ ಸಹಾಯಕ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ತನಿಖಾ ಠಾಣೆ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ನಸುಕಿನ ಜಾವ ದಾಳಿ ನಡೆಸಿದ್ದಾರೆ.
ಬೆಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಸಂತ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆದ್ದಾರಿಯ ಎರಡೂ ಬದಿಯಲ್ಲಿರುವ ಎರಡು ಕಚೇರಿಗಳ ಮೇಲೆ ದಾಳಿ ನಡೆಸಿ, ಶೋಧ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.