ADVERTISEMENT

ಶ್ರೀರಾಮನ ಅವಹೇಳನ; ಆರೋಪಿ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 7:49 IST
Last Updated 14 ಫೆಬ್ರುವರಿ 2026, 7:49 IST
ಹುಲಸೂರ ಸಮೀಪದ ಭಾಲ್ಕಿ ತಾಲ್ಲೂಕಿನ ಅಳವಾಯಿ ಗ್ರಾಮದಲ್ಲಿ ಹಿಂದೂ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಆರೋಪಿಯ ವಿರುದ್ಧ ಪ್ರತಿಭಟನೆ ನಡೆಸಿದರು
ಹುಲಸೂರ ಸಮೀಪದ ಭಾಲ್ಕಿ ತಾಲ್ಲೂಕಿನ ಅಳವಾಯಿ ಗ್ರಾಮದಲ್ಲಿ ಹಿಂದೂ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಆರೋಪಿಯ ವಿರುದ್ಧ ಪ್ರತಿಭಟನೆ ನಡೆಸಿದರು   

ಹುಲಸೂರ: ಸಮೀಪದ ಭಾಲ್ಕಿ ತಾಲ್ಲೂಕಿನ ಅಳವಾಯಿ ಗ್ರಾಮದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆರೋಪಿಯ ವಿರುದ್ಧ ಪ್ರತಿಭಟನೆ ನಡೆಸಿದರು.

ಕಾರ್ಯಕರ್ತರು ಆರೋಪಿಯ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಕಾರರು ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯ ವೇಳೆ ಕಾರ್ಯಕರ್ತರು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಘಟನೆಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಂದೋಬಸ್ತ್ ಒದಗಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.