ADVERTISEMENT

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 11:40 IST
Last Updated 20 ಏಪ್ರಿಲ್ 2019, 11:40 IST

ಬೀದರ್: ‘ರಾಯಚೂರಿನ ನವೋದಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದರು.

‘ಈಗಾಗಲೇ ರಾಯಚೂರು ಪೊಲೀಸರಿಂದ ಪ್ರಕರಣದ ಮಾಹಿತಿ ಪಡೆದುಕೊಂಡಿದ್ದೇನೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿರಲಿ, ಎಲ್ಲೇ ಇರಲಿ ಅವರನ್ನು ಪತ್ತೆ ಹಚ್ಚಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT