ADVERTISEMENT

ಭಾಲ್ಕಿ: ಮಾಗನೂರು ಬಸಪ್ಪ ಪ್ರಶಸ್ತಿಗೆ ಪಟ್ಟದ್ದೇವರು ಆಯ್ಕೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 16:05 IST
Last Updated 19 ಜುಲೈ 2024, 16:05 IST
2023ನೇ ಸಾಲಿನ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿಗೆ ಆಯ್ಕೆಯಾದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರನ್ನು ಭಾಲ್ಕಿಯ ಮಠದಲ್ಲಿ ಸನ್ಮಾನಿಸಿ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಲಾಯಿತು
2023ನೇ ಸಾಲಿನ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿಗೆ ಆಯ್ಕೆಯಾದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರನ್ನು ಭಾಲ್ಕಿಯ ಮಠದಲ್ಲಿ ಸನ್ಮಾನಿಸಿ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಲಾಯಿತು   

ಭಾಲ್ಕಿ: ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಬಸವಲಿಂಗ ಪಟ್ಟದ್ದೇವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ ಮತ್ತು ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ದಾವಣಗೆರೆ ವತಿಯಿಂದ ಕೊಡಮಾಡುವ 2023ನೇ ಸಾಲಿನ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜು27ರಂದು ಶನಿವಾರ ಬೀದರ್‌ನ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜಿಲ್ಲಾ ಕಸಾಪ ಬೀದರ್ ಹಾಗೂ ಜಿಲ್ಲಾ ಕಸಾಪ ದಾವಣಗೆರೆ ಮತ್ತು ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ದಾವಣಗೆರೆ ಸಹಯೋಗದಲ್ಲಿ ನಡೆಯಲಿರುವ  ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಸಮಾರಂಭಕ್ಕೆ ಪಟ್ಟದ್ದೇವರನ್ನು ಆಹ್ವಾನಿಸಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ ಚನಶೆಟ್ಟಿ, ದಾವಣಗೆರೆ ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್ ನ ಉಪನ್ಯಾಸಕ ಶಾಂತರಾಜ ಎಸ್.ಜಿ, ಲೋಹಿತ್ ಕುಮಾರ ಡಿ.ಆರ್, ಕಸಾಪ ಪ್ರಧಾನ ಕಾರ್ಯದರ್ಶಿ ರಮೇಶ ಚಿದ್ರಿ, ತಾಲ್ಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ನಗರ ಘಟಕದ ಅಧ್ಯಕ್ಷ ಸಂತೋಷ ಬಿಜಿ ಪಾಟೀಲ, ಓಂಕಾರ ರಂಜೇರೆ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.