ADVERTISEMENT

ಭಾಲ್ಕಿ: ಸಾಮೂಹಿಕ ಇಷ್ಟಲಿಂಗ ಪೂಜೆ ಕರಪತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 6:36 IST
Last Updated 12 ಫೆಬ್ರುವರಿ 2026, 6:36 IST
ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮದ ಕರಪತ್ರಗಳನ್ನು ಬಸವಲಿಂಗ ಪಟ್ಟದ್ದೇವರು ಬಿಡುಗಡೆಗೊಳಿಸಿದರು
ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮದ ಕರಪತ್ರಗಳನ್ನು ಬಸವಲಿಂಗ ಪಟ್ಟದ್ದೇವರು ಬಿಡುಗಡೆಗೊಳಿಸಿದರು   

ಭಾಲ್ಕಿ: ‘ಪಟ್ಟಣದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಫೆ.15ರಂದು ಮಹಾಶಿವರಾತ್ರಿ ಅಂಗವಾಗಿ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.

ಪಟ್ಟಣದ ಚನ್ನಬಸವಾಶ್ರಮದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆಯ ಕರಪತ್ರ ಬಿಡುಗಡೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಶರಣರ ದೃಷ್ಟಿಯಲ್ಲಿ ಮಹಾಶಿವರಾತ್ರಿಯು ಕೇವಲ ವರ್ಷಕ್ಕೊಮ್ಮೆ ಬರುವ ಹಬ್ಬವಲ್ಲ ಬದಲಾಗಿ ಲಿಂಗಾರ್ಚನೆ ಮತ್ತು ಶಿವಧ್ಯಾನದ ಮೂಲಕ ಪ್ರತಿನಿತ್ಯ ಆಚರಿಸುವ ಅಂತರಂಗದ ಜಾಗರಣೆಯಾಗಿದೆ. ಅಂದು ಮಧ್ಯಾಹ್ನ 1ಕ್ಕೆ ನಡೆಯಲಿರುವ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಬೇಕು’ ಎಂದರು.

ADVERTISEMENT

ತಾಲ್ಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ತಾಲ್ಲೂಕು ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸವರಾಜ ಮರೆ, ನಿವೃತ್ತ ಎಂಜಿನಿಯರ್ ಶರಣಪ್ಪ ಬಿರಾದಾರ, ಶಿವಾನಂದ ಗುಂದಗೆ, ರೇಖಾಬಾಯಿ ಅಷ್ಟೂರೆ, ರೇಖಾ ಮಹಾಜನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.