ADVERTISEMENT

ಮೈಲಾರ ಮಲ್ಲಣ್ಣ ಜಾತ್ರೆ ಇಲ್ಲ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 14:00 IST
Last Updated 17 ಡಿಸೆಂಬರ್ 2020, 14:00 IST
ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿನ ದೇವರ ವಿಗ್ರಹ
ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿನ ದೇವರ ವಿಗ್ರಹ   

ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದ ಈ ಬಾರಿಯ ಜಾತ್ರೆ ರದ್ದುಪಡಿಸಿದ್ದು, ಭಕ್ತರು ಸಹಕರಿಸಬೇಕು ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ಮನವಿ ಮಾಡಿದ್ದಾರೆ.

ಕೋವಿಡ್ ಕಾರಣ ಡಿಸೆಂಬರ್ 20ರಿಂದ 2021ರ ಜನವರಿ 20ರ ವರೆಗೆ ನಡೆಯಲಿದ್ದ ಜಾತ್ರೆಯನ್ನು ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ.

ಡಿ.20, 27, ಜನವರಿ 3 ಹಾಗೂ ಜ.10ರ ಭಾನುವಾರದ ಜಾತ್ರೆ ಇರುವುದಿಲ್ಲ. ನಾಲ್ಕೂ ಭಾನುವಾರ ದೇವಸ್ಥಾನ ಪರಿಸರದಲ್ಲಿ ಯಾವುದೇ ಅಂಗಡಿಗಳನ್ನು ತೆರೆಯಲು ಹಾಗೂ ಭಕ್ತರ ಓಡಾಟಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ADVERTISEMENT

ಉಳಿದ ದಿನಗಳಲ್ಲಿ ಭಕ್ತರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ದೇವರ ದರ್ಶನ ಮಾತ್ರ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಪ್ರಯುಕ್ತ ಪ್ರಸಕ್ತ ವರ್ಷ ಜಾತ್ರೆಯ ಸಾಂಕೇತಿಕ ಆಚರಣೆ ಮಾತ್ರ ಇರಲಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.