ADVERTISEMENT

26 ರಂದು ಪಲ್ಲಕ್ಕಿ ಉತ್ಸವ

ಮೈಲಾರ ಮಲ್ಲಣ್ಣ ದೇವಸ್ಥಾನ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 15:27 IST
Last Updated 22 ಅಕ್ಟೋಬರ್ 2020, 15:27 IST
ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಇರುವ ಮಲ್ಲಣ್ಣ ದೇವರ ಮೂರ್ತಿ
ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಇರುವ ಮಲ್ಲಣ್ಣ ದೇವರ ಮೂರ್ತಿ   

ಬೀದರ್: ವಿಜಯದಶಮಿ ಪ್ರಯುಕ್ತ ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಅಕ್ಟೋಬರ್ 26 ರಂದು ಪಲ್ಲಕ್ಕಿ ಉತ್ಸವ ನಡೆಯಲಿದೆ.

ಕೊರೊನಾ ಸೋಂಕಿನ ಕಾರಣ ಈ ಬಾರಿ ಉತ್ಸವ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮೈಲಾರ ಮಲ್ಲಣ್ಣ ದೇವಸ್ಥಾನ ಸಮಿತಿಯ ಅಧ್ಯಕ್ಷ ಕೆ.ಡಿ. ಗಣೇಶ ತಿಳಿಸಿದ್ದಾರೆ.

ದೇವಸ್ಥಾನದ ವ್ಯವಸ್ಥಾಪಕ ಮಂಡಳಿ ಸದಸ್ಯರು ಹಾಗೂ ಅರ್ಚಕರು ಧಾರ್ಮಿಕ ವಿಧಿ ವಿಧಾನಗಳ ಪ್ರಕಾರ ಉತ್ಸವವನ್ನು ನೆರವೇರಿಸಲಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

26 ರಂದು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆ ವರೆಗೆ ಮಾತ್ರ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿದೆ.
ರಾತ್ರಿ ದೇವಸ್ಥಾನದ ಸುತ್ತಮುತ್ತ ಭಕ್ತರು ವಾಸ್ತವ್ಯ ಮಾಡುವುದನ್ನು ನಿಷೇಧಿಸಲಾಗಿದೆ. ದೇವರ ದರ್ಶನಕ್ಕೆ ಬರುವ ಭಕ್ತರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ವಿಜಯದಶಮಿ ದಿನದಂದು ಪ್ರತಿ ವರ್ಷ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಸಹಸ್ರಾರು ಭಕ್ತರು ಶ್ರದ್ಧೆ, ಭಕ್ತಿಯಿಂದ ಪಾಲ್ಗೊಳ್ಳುತ್ತಿದ್ದರು. ಕೊರೊನಾ ಮಹಾಮಾರಿ ಕಾರಣ ಈ ವರ್ಷ ಉತ್ಸವವನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ಭಕ್ತರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.