ADVERTISEMENT

‘ರೈಲು ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿ’ 

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 13:26 IST
Last Updated 24 ಸೆಪ್ಟೆಂಬರ್ 2022, 13:26 IST
ಬೀದರ್‌ನ ರೈಲು ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಎಸ್.ಕೆ. ಕನಕಟ್ಟೆ
ಬೀದರ್‌ನ ರೈಲು ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಎಸ್.ಕೆ. ಕನಕಟ್ಟೆ   

ಬೀದರ್: ‘ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ರೈಲು ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಎಸ್.ಕೆ.ಕನಕಟ್ಟೆ ಹೇಳಿದರು.

ಇಲ್ಲಿಯ ರೈಲು ನಿಲ್ದಾಣಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ನಿಲ್ದಾಣದಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ಸೌಲಭ್ಯ ಪರಿಶೀಲಿಸಿ ಅವರು ಮಾತನಾಡಿದರು.

ರೈಲು ನಿಲ್ದಾಣದಲ್ಲಿ ಜನದಟ್ಟಣೆ ಇರುವುದು ಸಹ. ರೈಲು ನಿಲ್ದಾಣದ ಅಧಿಕಾರಿಗಳು ನಿತ್ಯ ಪರಿಶೀಲನೆ ನಡೆಸಿ ನಿಲ್ದಾಣದಲ್ಲಿ ನೈರ್ಮಲ್ಯ ಕಾಯ್ದುಕೊಳ್ಳಲು ಪ್ರಯತ್ನಿಸಬೇಕು ಎಂದರು.

ADVERTISEMENT

ನವೆಂಬರ್ 12ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ ಕುರಿತು ಸಾರ್ವಜನಿಕರಿಗೆ ರೈಲು ನಿಲ್ದಾಣದಲ್ಲಿರುವ ಧ್ವನಿ ವರ್ಧಕದ ಮೂಲಕ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ರೈಲು ನಿಲ್ದಾಣದ ಅಧಿಕಾರಿ ರಮೇಶಕುಮಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಿಬ್ಬಂದಿ ಜಗದೀಶ್ವರ ದೊರೆ, ಉಮೇಶ ಮಠದ ಹಾಗೂ ಆಕಾಶ ಸಜ್ಜನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.