ADVERTISEMENT

ಬೀದರ್: ದೈಹಿಕ, ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 7:09 IST
Last Updated 5 ಫೆಬ್ರುವರಿ 2023, 7:09 IST
ಬೀದರ್‌ನ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ನ್ಯಾಷನಲ್ ಹೋಲಿಸ್ಟಿಕ್ ಎಕ್ಸ್‍ಪೋ ನಡೆಯಿತು
ಬೀದರ್‌ನ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ನ್ಯಾಷನಲ್ ಹೋಲಿಸ್ಟಿಕ್ ಎಕ್ಸ್‍ಪೋ ನಡೆಯಿತು   

ಬೀದರ್: ವಿದ್ಯಾರ್ಥಿಗಳು ದೈಹಿಕ ಆರೋಗ್ಯದ ಜತೆ ಮಾನಸಿಕ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.
ಎ.ಸಿ.ಇ. ಟೀಮ್ ಕ್ಲಾಸ್ ವೈಜ್ ವತಿಯಿಂದ ನಗರದ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ಜರುಗಿದ ನ್ಯಾಷನಲ್ ಹೋಲಿಸ್ಟಿಕ್ ಎಕ್ಸ್‍ಪೋದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಹೊಸ ಹೊಸ ಅವಿಷ್ಕಾರಗಳೊಂದಿಗೆ ದೇಶದ ಏಳಿಗೆಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿ ಮಾತನಾಡಿದರು. ಬುಡಾ ಅಧ್ಯಕ್ಷ ಬಾಬು ವಾಲಿ, ಡಾ. ಅಮರ ಎರೋಳಕರ್, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಕಾಶ ಟೊಣ್ಣೆ, ಸಾಹಿತಿ ಸಿದ್ರಾಮಪ್ಪ ಮಾಸಿಮಾಡೆ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಉಪಸ್ಥಿತರಿದ್ದರು.

ಆಕಾಂಕ್ಷಾ ಟೊಣ್ಣೆ, ಶಿವಾಜಿ ಎರಟೆ, ಕ್ಷಿತಿಜಾ ಎರೋಳಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಕ್ಷ್ಮಿ ಗಾದಗಿ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.