ADVERTISEMENT

ಮಹಿಳೆಯರಿಗೆ ಶೇ 50 ರಷ್ಟು ಮೀಸಲು ಕಲ್ಪಿಸಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 15:00 IST
Last Updated 17 ಜುಲೈ 2021, 15:00 IST
ಬೀದರ್‌ನ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಸಭೆ ನಡೆಯಿತು
ಬೀದರ್‌ನ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಸಭೆ ನಡೆಯಿತು   

ಬೀದರ್: ರಾಜಕೀಯದಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಮೀಸಲು ಕಲ್ಪಿಸಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಪ್ರತಿಪಾದಿಸಿದರು.

ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಕ್ಷಕ್ಕಾಗಿ ದುಡಿದವರಿಗೆ ಒಳ್ಳೆಯ ಅವಕಾಶಗಳು ದೊರೆಯಲಿವೆ ಎಂದು ತಿಳಿಸಿದರು.

ADVERTISEMENT

ಮಹಿಳಾ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಮ್ಮ ಪಾಟೀಲ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರಹಂತ ಸಾವಳೆ ಮಾತನಾಡಿದರು.

ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಲುಂಬಿಣಿ ಗೌತಮ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮಾಯಾವತಿ ಸಿಂಧನಕೇರಾ, ಪ್ರಸನ್ನಲಕ್ಷ್ಮಿ ದೇಶಪಾಂಡೆ, ಶೋಭಾ ತೆಲಂಗ್, ರೂಪಾ ಜಾಧವ್, ಸಂಗೀತಾ ಅಕಡೆ, ಮಹಾನಂದಾ ಕೋಟೆ, ಪ್ರೇಮಾ, ಸವಿತಾ, ಸಂಗೀತಾ, ಮೀನಾ, ಅಂಬವ್ವ, ಸುವರ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.