ADVERTISEMENT

ಎಲ್ಲ ಮಕ್ಕಳಿಗೂ ಲಸಿಕೆ ಕಡ್ಡಾಯ ಕೊಡಿಸಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 16:12 IST
Last Updated 14 ಜನವರಿ 2022, 16:12 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು 15 ರಿಂದ 18 ವರ್ಷದ ಒಳಗಿನ ಮಕ್ಕಳ ಲಸಿಕಾಕರಣ ಸಂಬಂಧ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು 15 ರಿಂದ 18 ವರ್ಷದ ಒಳಗಿನ ಮಕ್ಕಳ ಲಸಿಕಾಕರಣ ಸಂಬಂಧ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು   

ಬೀದರ್: 15 ರಿಂದ 18 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಕೋವಿಡ್ ಪ್ರತಿಬಂಧಕ ಲಸಿಕೆ ಕಡ್ಡಾಯವಾಗಿ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸೂಚಿಸಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ತಹಶೀಲ್ದಾರರು, ಪದವಿಪೂರ್ವ ಕಾಲೇಜು ಪ್ರಾಚಾರ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್‍ಸಿ, ಸಿಆರ್‍ಸಿ ಅವರೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ 15 ರಿಂದ 18 ವರ್ಷದ ಒಳಗಿನ ಶೇ 80 ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಪಾಲಕರ ಮನವೊಲಿಸಿ ಬಾಕಿ ಶೇ 20 ರಷ್ಟು ಮಕ್ಕಳಿಗೂ ಲಸಿಕೆ ಕೊಡಿಸಬೇಕು ಎಂದು ಹೇಳಿದರು.

ADVERTISEMENT

ಲಸಿಕಾಕರಣ ಕಾರ್ಯವನ್ನು ಜವಾಬ್ದಾರಿಯುತವಾಗಿ ಮಾಡಬೇಕು. ಶನಿವಾರ ಶಾಲಾ, ಕಾಲೇಜುಗಳಿಂದ ಹೊರಗುಳಿದ, ಗೈರಾದ ಮಕ್ಕಳ ಮನೆ ಮನೆಗೆ ತೆರಳಿ ಲಸಿಕೆ ಕೊಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ, ಬ್ರಿಮ್ಸ್ ನಿರ್ದೇಶಕ ಡಾ. ಚಂದ್ರಕಾಂತ ಚಿಲ್ಲರ್ಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಬಾರಾಟಕೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.