ಹುಲಸೂರ: ತಾಲ್ಲೂಕಿನ ಗಡಿ ಗೌಡಗಾಂವ ಗ್ರಾಮದಲ್ಲಿ ಸೋಮವಾರ ತಮ್ಮ ಜಮೀನಿನಲ್ಲಿ ಗದ್ದೆ ಕೆಲಸ ಮಾಡಲು ಹೋಗಿದ್ದ ಯುವರಾಜ ಬಿರಾದಾರ (42) ಹೆಜ್ಜೇನು ದಾಳಿಯಲ್ಲಿ ಮೃತಪಟ್ಟಿದ್ದಾರೆ.
ಯುವರಾಜ ಬಿರಾದಾರ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹೆಜ್ಜೇನು ನೊಣಗಳು ಏಕಾಏಕಿ ದಾಳಿ ಮಾಡಿದ್ದು, ಅವುಗಳನ್ನು ಓಡಿಸಲು ಬೆಂಕಿ ಹಚ್ಚಿದ್ದಾರೆ. ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬೆಂಕಿಯಲ್ಲಿ ಬಿದ್ದು ಗಾಯಗೊಂಡಿದ್ದು, ಕೂಡಲೇ ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ತಪಾಸಣೆ ನಡೆಸಿ ಯುವರಾಜ ಮೃತಪಟ್ಟಿದ್ದಾರೆ ಎಂದು ಕುಟುಂಬದವರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.