
ಪ್ರಜಾವಾಣಿ ವಾರ್ತೆ
ಬಂಧನ
(ಪ್ರಾತಿನಿಧಿಕ ಚಿತ್ರ)
ಔರಾದ್: ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಸಾವಿಗೆ ಕಾರಣರಾದ ಇಬ್ಬರು ಆರೋಪಿಗಳನ್ನು ತಾಲ್ಲೂಕಿನ ಚಿಂತಾಕಿ ಪೊಲೀಸರು ಬಂಧಿಸಿದ್ದಾರೆ.
ಹಲ್ಲೆಯಿಂದ ಗಾಯಗೊಂಡ ವ್ಯಕ್ತಿ ವಿಷ್ಣು ಜೈಸಿಂಗ್(27) ಅಕ್ಟೋಬರ್ 22ರಂದು ಹೈದರಾಬಾದ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರ ಮೇಲೆ ನಾಗನಪಲ್ಲಿ ಗ್ರಾಮದ ಗಜಾನಂದ ಹಾಗೂ ಅಶೋಕ ಎಂಬುವರು ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ.
ಗಾಯಗೊಂಡ ವಿಷ್ಣು ಅವರನ್ನು ಬೀದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೈದರಾಬಾದ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟರು ಎಂದು ಮೃತನ ತಾಯಿ ಲಕ್ಷ್ಮಿ ಜೈಸಿಂಗ್ ನೀಡಿದ ದೂರಿನ ಮೇರೆಗೆ ಚಿಂತಾಕಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಷ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.