ADVERTISEMENT

ಬೆಳೆಗಳಲ್ಲಿ ರೋಗಗಳ ನಿರ್ವಹಣೆ: ಶನಿವಾರ ತರಬೇತಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2021, 15:30 IST
Last Updated 30 ಜುಲೈ 2021, 15:30 IST

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಕೆ.ವಿ.ಕೆ ಕೃಷಿ ಪಾಠಶಾಲೆ ಸರಣಿಯಲ್ಲಿ ಮುಂಗಾರು ಬೆಳೆಗಳಲ್ಲಿ ರೋಗಗಳ ಸಮಗ್ರ ನಿರ್ವಹಣೆ ಕುರಿತು ರೈತರಿಗೆ ಶನಿವಾರ (ಜು.31) ಬೆಳಿಗ್ಗೆ 11ಕ್ಕೆ ಆನ್‍ಲೈನ್‍ನಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಸುನೀಲ್ ಎ. ಕುಲಕರ್ಣಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬೆಳೆಗಳಿಗೆ ಬಾಧಿಸಬಹುದಾದ ರೋಗಗಳು, ಲಕ್ಷಣಗಳು, ಅವುಗಳ ನಿರ್ವಹಣೆಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುವುದು. ರೈತರ ಪ್ರಶ್ನೆಗಳಿಗೆ ಉತ್ತರಿಸಲಾಗುವುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ ತಿಳಿಸಿದ್ದಾರೆ.

ADVERTISEMENT

ರೈತರು ಗೂಗಲ್ ಮೀಟ್ ಲಿಂಕ್ meet.google.com/vrw-brgm-hxq <https://meet.google.com/vrw-brgm-hxq?hs=224> ಬಳಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.