ADVERTISEMENT

ಆರ್ಥಿಕ ಸ್ವಾವಲಂಬನೆಗೆ ಮಾವು ಬೇಸಾಯ ನೆರವು: ರಾಜಕುಮಾರ್

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 5:01 IST
Last Updated 7 ಏಪ್ರಿಲ್ 2022, 5:01 IST
ಚಿಟಗುಪ್ಪ ತಾಲ್ಲೂಕಿನ ಕಂದಗುಳ್‌ ಗ್ರಾಮದಲ್ಲಿ ತೋಟಗಾರಿಕೆ ಮಹಾವಿದ್ಯಾಲಯದಿಂದ ಮಾವು ಬೇಸಾಯ ಪ್ರಾತ್ಯಕ್ಷಿಕೆ ನೀಡಲಾಯಿತು
ಚಿಟಗುಪ್ಪ ತಾಲ್ಲೂಕಿನ ಕಂದಗುಳ್‌ ಗ್ರಾಮದಲ್ಲಿ ತೋಟಗಾರಿಕೆ ಮಹಾವಿದ್ಯಾಲಯದಿಂದ ಮಾವು ಬೇಸಾಯ ಪ್ರಾತ್ಯಕ್ಷಿಕೆ ನೀಡಲಾಯಿತು   

ಚಿಟಗುಪ್ಪ: ‘ಸೂಕ್ತ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿ ತಜ್ಞರ ಮಾರ್ಗದರ್ಶನದಲ್ಲಿ ಮಾವು ಬೇಸಾಯ ಮಾಡಿದಲ್ಲಿ ಅಧಿಕ ಇಳುವರಿ ಹಾಗೂ ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು’ ಎಂದು ಬೀದರ್‌ ತೋಟಗಾರಿಕೆ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ರಾಜಕುಮಾರ್‌ ಹೇಳಿದರು.

ತಾಲ್ಲೂಕಿನ ಕಂದಗುಳ್‌ ಗ್ರಾಮದ ಸಂಗಪ್ಪ ಸದ್ಲಾಪುರೆ ಅವರ ತೋಟದಲ್ಲಿ ತೋಟಗಾರಿಕೆ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಕ್ಷೇತ್ರ ಕಾರ್ಯಾನುಭವ ಶಿಬಿರದಲ್ಲಿ ರೈತರಿಗೆ ಮಾವಿನ ಮರ ಹಾಗೂ ಹಣ್ಣುಗಳಿಗೆ ಕೀಟನಾಶಕ ಸಿಂಪಡಣೆ ಮಾಡುವ ವಿಧಾನದ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಾವಿನ ಹಣ್ಣು ಉತ್ಪಾದನಾ ಪ್ರಮಾಣ ಹೆಚ್ಚಿಸಲು ಲಘು ಪೋಷಕಾಂಶಗಳ ಅವಶ್ಯಕತೆ ಇದೆ’ ಎಂದರು.ಕೃಷಿ ಪದವಿ ವಿದ್ಯಾರ್ಥಿಗಳಾದ ನಿತಿನ್‌, ವಿಶಾಲ್‌, ಗ್ರಾಮದ ರೈತರು ಇದ್ದರು.

ADVERTISEMENT

ಸಾಯಿಕುಮಾರ್‌ ಸ್ವಾಗತಿಸಿದರು. ಸಂತೋಷ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.