ಬೀದರ್: ಚಿಟಗುಪ್ಪ ತಾಲ್ಲೂಕಿನ ತಾಳಮಡಗಿ ಸೇತುವೆ ಸಮೀಪ ಮಾಂಜಾ ದಾರದಿಂದ ಸಾವನ್ನಪ್ಪಿದ ಬೀದರ್ ತಾಲ್ಲೂಕಿನ ಬಂಬುಳಗಿ ಗ್ರಾಮದ ಸಂಜುಕುಮಾರ್ ಗುಂಡಪ್ಪ ಹೊಸಮನಿ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಶುಕ್ರವಾರ ಭೇಟಿ ನೀಡಿದರು.
ಹೊಸಮನಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ವೈಯಕ್ತಿಕ ಧನ ಸಹಾಯ ನೀಡಿದರು. ಸರ್ಕಾರದ ಕಡೆಯಿಂದಲೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವ ಆಶ್ವಾಸನೆ ನೀಡಿದರು.
ನಿಷೇಧಿತ ಚೀನಾ ಮಾಂಜಾ ದಾರ ಮಾನವ ಜೀವಕ್ಕೆ ಅತ್ಯಂತ ಅಪಾಯಕಾರಿ ಆಗಿದೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ನಿಷೇಧಿತ ಮಾಂಜಾ ದಾರ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಸಾರ್ವಜನಿಕರು ಹೆಚ್ಚಿನ ಎಚ್ಚರ ವಹಿಸಿ ಸಹಕರಿಸಬೇಕೆಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.