ADVERTISEMENT

ಬೀದರ್‌| ಬೈಕ್‌ ಮೇಲೆ ತೆರಳುವಾಗ ಕತ್ತು ಸೀಳಿದ ಗಾಳಿಪಟದ ಮಾಂಜಾ; ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 14 ಜನವರಿ 2026, 8:46 IST
Last Updated 14 ಜನವರಿ 2026, 8:46 IST
<div class="paragraphs"><p>ಸಂಜುಕುಮಾರ ಗುಂಡಪ್ಪ ಹೊಸಮನಿ</p></div>

ಸಂಜುಕುಮಾರ ಗುಂಡಪ್ಪ ಹೊಸಮನಿ

   

ಬೀದರ್‌: ಬೈಕ್‌ ಮೇಲೆ ತೆರಳುವಾಗ ಗಾಳಿಪಟದ ಮಾಂಜಾ ಕತ್ತಿಗೆ ಸಿಕ್ಕಿಕೊಂಡು ಸೀಳಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲ್ಲೂಕಿನ ತಾಳಮಡಗಿಯಲ್ಲಿ ಬುಧವಾರ ನಡೆದಿದೆ.

ಸಂಜುಕುಮಾರ ಗುಂಡಪ್ಪ ಹೊಸಮನಿ (48) ಮೃತ ವ್ಯಕ್ತಿ. ಮೃತರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ

ADVERTISEMENT

ಸಂಕ್ರಾಂತಿ ಹಬ್ಬದ ರಜೆ ಇರುವುದರಿಂದ ಹುಮನಾಬಾದ್‌ ಪಟ್ಟಣದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳನ್ನು ಕರೆತರಲು ಬೈಕ್‌ ಮೇಲೆ ತೆರಳುವಾಗ ಈ ಘಟನೆ ನಡೆದಿದೆ.

ಚಿಟಗುಪ್ಪ ತಾಲ್ಲೂಕಿನ ತಾಳಮಡಗಿ ಗ್ರಾಮದ ಸೇತುವೆ ಬಳಿ ಈ ಘಟನೆ ಜರುಗಿದೆ. ಕತ್ತಿಗೆ ಮಾಂಜಾ ಸಿಲುಕಿ ರಕ್ತಸ್ರಾವವಾಗಿ ಕೆಳಗೆ ಬಿದ್ದು ಹೊರಳಾಡಿ ಕೊನೆಯುಸಿರೆಳೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹುಮನಾಬಾದ್‌, ಚಿಟಗುಪ್ಪ ಭಾಗದಲ್ಲಿ ಜನ ಗಾಳಿಪಟ ಹಾರಿಸಿ ಸಂಭ್ರಮಿಸುತ್ತಾರೆ. ‘ಪೇಂಚ್‌’ ಆಟಕ್ಕೆ ಮಾಂಜಾ ಹೆಚ್ಚಾಗಿ ಬಳಸುವ ರೂಢಿಯಿದ್ದು, ಇದರ ಬಳಕೆ ನಿರ್ಬಂಧಿಸಿ ತಹಶೀಲ್ದಾರ್‌ ಆದೇಶ ಹೊರಡಿಸಿದ್ದರು. ಆದರೂ, ಅದರೆ ಬಳಕೆ ಅವ್ಯಾಹತವಾಗಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.