ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಕೌಠಾ ಸಮೀಪ ಮಾಂಜ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಗೆ ಹೊಂದಿಕೊಂಡಿರುವ ಜಮೀನುಗಳೆಲ್ಲ ಜಲಾವೃತವಾಗಿವೆ
ಬೀದರ್: ನಗರದಲ್ಲಿ ಗುರುವಾರ ದಟ್ಟ ಕಾರ್ಮೋಡ ಕವಿದು ದಿನವಿಡೀ ಜಿಟಿಜಿಟಿ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು.
ಗುರುವಾರ ಬೆಳಕು ಹರಿಯುತ್ತಿದ್ದಂತೆ ಆರಂಭಗೊಂಡ ಮಳೆ ಕತ್ತಲಾಗುವವರೆಗೆ ನಿರಂತರವಾಗಿ ಸುರಿಯಿತು. ಬೀದರ್ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲೂ ಮಳೆಯಾಗಿದೆ. ಜಿಲ್ಲೆಯ ಔರಾದ್, ಭಾಲ್ಕಿ, ಹುಮನಾಬಾದ್, ಚಿಟಗುಪ್ಪದಲ್ಲೂ ಮಳೆ ಬಿದ್ದಿದೆ.
ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿರುವುದು ಹಾಗೂ ಅಲ್ಲಿನ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುತ್ತಿರುವ ಪರಿಣಾಮ ಜಿಲ್ಲೆಯ ಮಾಂಜ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಕಾರಂಜಾ ಕೂಡ ಮೈದುಂಬಿ ಹರಿಯುತ್ತಿದೆ. ಕಮಲನಗರ, ಭಾಲ್ಕಿ ಹಾಗೂ ಹುಲಸೂರಿನ ಹಲವೆಡೆ ಸೇತುವೆಗಳ ಮೇಲಿಂದ ನೀರು ಹರಿಯುತ್ತಿದ್ದು ಸಂಪರ್ಕ ಕಡಿತಗೊಂಡಿದೆ. ಜಮೀನುಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿದೆ. ನದಿಗೆ ಹೊಂದಿಕೊಂಡಿರುವ ಜಮೀನುಗಳು ಸಂಪೂರ್ಣ ಜಲಾವೃತವಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.