ADVERTISEMENT

ಹುಮನಾಬಾದ್ | ಮಂಜುಳಾ ಕಲ್ಲೂರ್ ಗ್ರಾ.ಪಂ ಅಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 13 ಮೇ 2025, 15:26 IST
Last Updated 13 ಮೇ 2025, 15:26 IST
ಹುಮನಾಬಾದ್ ತಾಲ್ಲೂಕಿನ ಕಲ್ಲೂರ್ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುಳಾ ಹಾಗೂ ಸದಸ್ಯರನ್ನು  ಸನ್ಮಾನಿಸಲಾಯಿತು
ಹುಮನಾಬಾದ್ ತಾಲ್ಲೂಕಿನ ಕಲ್ಲೂರ್ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುಳಾ ಹಾಗೂ ಸದಸ್ಯರನ್ನು  ಸನ್ಮಾನಿಸಲಾಯಿತು   

ಹುಮನಾಬಾದ್: ತಾಲ್ಲೂಕಿನ ಕಲ್ಲೂರ್ ಗ್ರಾಮ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮಂಜುಳಾ ದೊಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷ ಶಂಕರ್ ಪವರ್ ಸ್ವಯಿಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದರು. ತೆರವಾದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ಮಂಜುಳಾ ಒಬ್ಬರೇ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಚುನಾವಣಾಧಿಕಾರಿಯು ಆದ ದೀಪಿಕಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುಳಾ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರನ್ನು ಗ್ರಾಮಸ್ಥರು  ಸನ್ಮಾನಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.