ಔರಾದ್: ಇಲ್ಲಿಯ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಎದುರಿಸುತ್ತಿರುವ ಅಂಕಪಟ್ಟಿ ವಿಳಂಬ ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಪಾಲಕರು ತಮ್ಮ ಬಳಿ ಬಂದು 2022–23ನೇ ಸಾಲಿನಲ್ಲಿ ಪರೀಕ್ಷೆ ಬರೆದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಂಕಪಟ್ಟಿ ಬಾರದಿರುವ ಕುರಿತು ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ತಾವು ಉನ್ನತ ಶಿಕ್ಷಣ ಸಚಿವರು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರ ಗಮನಕ್ಕೆ ತಂದು ಸಮಸ್ಯೆ ಪರಿಹರಿಲು ತಿಳಿಸಲಾಗಿದೆ. ಆದಷ್ಟು ಬೇಗ ಎಲ್ಲ ವಿದ್ಯಾರ್ಥಿಗಳ ಅಂಕಪಟ್ಟಿ ಅವರ ಕೈ ಸೇರಲಿದೆ. ಹೀಗಾಗಿ ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡಬಾರದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.