ADVERTISEMENT

ಹುತಾತ್ಮ ಧರ್ಮಪ್ರಕಾಶ ಸ್ಮಾರಕ ಉದ್ಘಾಟನೆ ನಾಳೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 16:31 IST
Last Updated 24 ಜೂನ್ 2025, 16:31 IST
ಬಸವಕಲ್ಯಾಣದ ಧರ್ಮಪ್ರಕಾಶ ಓಣಿಯಲ್ಲಿ ನಿರ್ಮಿಸಿರುವ ಹುತಾತ್ಮ ಧರ್ಮಪ್ರಕಾಶ ಸ್ಮಾರಕ
ಬಸವಕಲ್ಯಾಣದ ಧರ್ಮಪ್ರಕಾಶ ಓಣಿಯಲ್ಲಿ ನಿರ್ಮಿಸಿರುವ ಹುತಾತ್ಮ ಧರ್ಮಪ್ರಕಾಶ ಸ್ಮಾರಕ   

ಬಸವಕಲ್ಯಾಣ: ನಗರದ ಧರ್ಮಪ್ರಕಾಶ ಓಣಿಯಲ್ಲಿ ಹೊಸದಾಗಿ ನಿರ್ಮಿಸಿರುವ ಕಲ್ಯಾಣ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಹುತಾತ್ಮರಾದ ಧರ್ಮಪ್ರಕಾಶ ಸ್ಮರಣಾರ್ಥ ಸ್ಮಾರಕ ಸ್ತಂಭದ ಉದ್ಘಾಟನೆ ಹಾಗೂ ಧರ್ಮ ಪ್ರಕಾಶ ಅವರ 87ನೇ ಬಲಿದಾನ ದಿನ ಕಾರ್ಯಕ್ರಮ ಜೂನ್ 25ರಂದು ತಾಲ್ಲೂಕು ಆರ್ಯ ಸಮಾಜ ಸಂಘದಿಂದ ಆಯೋಜಿಸಲಾಗಿದೆ.

ಬೆಳಿಗ್ಗೆ 8 ಗಂಟೆಗೆ ಸ್ತಂಭದ ಉದ್ಘಾಟನೆ ನೆರವೇರಿಸಿದ ನಂತರ ಮೆರವಣಿಗೆ ನಡೆಯಲಿದೆ. ಬಳಿಕ ಡಾ.ಅಂಬೇಡ್ಕರ್ ವೃತ್ತದಲ್ಲಿನ ಆರ್ಯ ಸಮಾಜ ಭವನದಲ್ಲಿ ತ್ರಿಪುರಾಂತ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರ ನೇತೃತ್ವದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗುತ್ತದೆ. ಆರ್ಯ ಸಮಾಜ ಸಂಘದ ರಾಜ್ಯ ಕಾರ್ಯದರ್ಶಿ ಸಿದ್ಧಾಜಿ ಪಾಟೀಲ ಬೆಂಗಳೂರು ಅಧ್ಯಕ್ಷತೆ ವಹಿಸುವರು.

ಶಾಸಕ ಶರಣು ಸಲಗರ ಸೇರಿದಂತೆ ಹಲವರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ADVERTISEMENT
ಧರ್ಮಪ್ರಕಾಶ ತೈಲಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.