ADVERTISEMENT

ಮಾಸ್ಕ್, ಸ್ಯಾನಿಟೈಸರ್ ಕಿಟ್‌ ವಿತರಣೆ

ಪಿಎಚ್‌ಸಿಗಳಿಗೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಕೊಡುಗೆ

​ಪ್ರಜಾವಾಣಿ ವಾರ್ತೆ
Published 21 ಮೇ 2021, 4:17 IST
Last Updated 21 ಮೇ 2021, 4:17 IST
ಭಾಲ್ಕಿಯ ತಾಲ್ಲೂಕು ವೈದ್ಯಾಧಿಕಾರಿ ಕಚೇರಿಯಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜಪ್ಪ ಪಾಟೀಲ ತಾಲ್ಲೂಕು ವೈದ್ಯಾಧಿಕಾರಿ ಡಾ.ಜ್ಞಾನೇಶ್ವರ ನಿರಗೂಡೆ ಅವರ ಮೂಲಕ ಪಿಎಚ್‍ಸಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು
ಭಾಲ್ಕಿಯ ತಾಲ್ಲೂಕು ವೈದ್ಯಾಧಿಕಾರಿ ಕಚೇರಿಯಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜಪ್ಪ ಪಾಟೀಲ ತಾಲ್ಲೂಕು ವೈದ್ಯಾಧಿಕಾರಿ ಡಾ.ಜ್ಞಾನೇಶ್ವರ ನಿರಗೂಡೆ ಅವರ ಮೂಲಕ ಪಿಎಚ್‍ಸಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು   

ಭಾಲ್ಕಿ: ತಾಲ್ಲೂಕಿನಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಮುಂಚೂಣಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿಗೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಕಿಟ್‌ ವಿತರಣೆ ಮಾಡಲಾಯಿತು.

ತಾಲ್ಲೂಕು ವೈದ್ಯಾಧಿಕಾರಿ ಕಚೇರಿಯಲ್ಲಿ ಗುರುವಾರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜಪ್ಪ ಪಾಟೀಲ ಅವರು ತಾಲ್ಲೂಕು ವೈದ್ಯಾಧಿಕಾರಿ ಮೂಲಕ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿತರಿಸಿದರು.

ಬಳಿಕ ಮಾತನಾಡಿದ ಅವರು, ‘ಕೋವಿಡ್ ವಿಪತ್ತು ನಿರ್ವಹಣೆಯಲ್ಲಿ ಮುಂಚೂಣಿಗಳಾಗಿ ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿ ಹಗಲಿರಳು ಕೆಲಸ ಮಾಡುತ್ತಿದ್ದಾರೆ. ಮನೆ, ಕುಟುಂಬ ಎನ್ನದೇ ಜೀವದ ಹಂಗು ತೊರೆದು ದಿನದ 24 ಗಂಟೆ ಜನರ ಜೀವ ರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ’ ಎಂದರು.

ADVERTISEMENT

ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸೋಮನಾಥ ತರನಳ್ಳೆ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಲ್ಮಂಡಗೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಸಂಗಮೇಶ ಮದಕಟ್ಟಿ, ರಾಜಕುಮಾರ ಬಿರಾದಾರ, ಸುನಿಲ್‌ ಬಿರಾದಾರ, ಸಿದ್ದು ತುಗಶೆಟ್ಟೆ, ಬಾಲಾಜಿ, ಸಂತೋಷ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.