ADVERTISEMENT

ಬೀದರ್: ಗರಿಷ್ಠ ಅಂಕ ಪಡೆದ ವಿವೇಕ್‍ಗೆ ಸತ್ಕಾರ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 11:55 IST
Last Updated 23 ಜುಲೈ 2021, 11:55 IST
ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಪಡೆದ ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಪದವಿಪೂರ್ವ ವಿಜ್ಞಾನ ಕಾಲೇಜು ವಿದ್ಯಾರ್ಥಿ ವಿವೇಕ ವಿನೋದ್ ಅವರನ್ನು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಬೀದರ್‌ನಲ್ಲಿ ಸನ್ಮಾನಿಸಿದರು

ಬೀದರ್: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಪಡೆದ ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಪದವಿಪೂರ್ವ ವಿಜ್ಞಾನ ಕಾಲೇಜು ವಿದ್ಯಾರ್ಥಿ ವಿವೇಕ ವಿನೋದ್ ಅವರನ್ನು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸತ್ಕರಿಸಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ ಕೋಬಾಳಕರ್, ಭಾಲ್ಕಿ ತಾಲ್ಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಪ್ರಾಚಾರ್ಯ ಬಸವರಾಜ ಮೋಳಕೇರೆ, ಅಶೋಕಕುಮಾರ ಕರಂಜಿ, ಶಿವಕುಮಾರ ಸ್ವಾಮಿ, ಪೃಥ್ವಿರಾಜ್, ಸುನೀಲ ಕುಲಕರ್ಣಿ, ನಾಗಶೆಟ್ಟಿ ಧರಂಪುರ, ವಿಜಯಕುಮಾರ ಸೋನಾರೆ, ಸುನೀಲ ಭಾವಿಕಟ್ಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.