ಬೀದರ್: ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ವತಿಯಿಂದ ಇಲ್ಲಿಯ ಗುರುದ್ವಾರದಿಂದ ಚಿಕ್ಕಪೇಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಬದಿಯಲ್ಲಿ ಸಸಿ ನೆಡಲಾಯಿತು.
ಕ್ಲಬ್ ಪದಾಧಿಕಾರಿಗಳು ರಸ್ತೆಯ ಎರಡೂ ಬದಿಗಳಲ್ಲಿ ಬೇವು ಸೇರಿದಂತೆ ವಿವಿಧ ಬಗೆಯ ಸಸಿಗಳನ್ನು ನೆಟ್ಟರು.
ನಗರ ಸೌಂದರ್ಯೀಕರಣ ಹಾಗೂ ಪರಿಸರ ಸಂರಕ್ಷಣೆ ಭಾಗವಾಗಿ ಕ್ಲಬ್ ವತಿಯಿಂದ 500 ಸಸಿಗಳನ್ನು ನೆಡಲು ಉದ್ದೇಶಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಡಾ.ನಿತೇಶಕುಮಾರ ಬಿರಾದಾರ ತಿಳಿಸಿದರು.
ಶಾಲೆ, ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ನೆಡಲಾಗುವುದು. ನಾಗರಿಕರಲ್ಲಿ ಪರಿಸರ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಕ್ಲಬ್ ನಿಕಟಪೂರ್ವ ಅಧ್ಯಕ್ಷ ಸೂರ್ಯಕಾಂತ ರಾಮಶೆಟ್ಟಿ, ಉಪಾಧ್ಯಕ್ಷ ಡಾ.ಕಪಿಲ್ ಪಾಟೀಲ, ಕಾರ್ಯದರ್ಶಿ ಸುಧೀಂದ್ರ ಸಿಂದೋಲ್, ಖಜಾಂಚಿ ಕಾಮಶೆಟ್ಟಿ ಚಿಕ್ಕಬಸೆ, ರೋಟರಿ ಕ್ಲಬ್ ಬೀದರ್ ನಿಕಟಪೂರ್ವ ಅಧ್ಯಕ್ಷ ಹಾವಶೆಟ್ಟಿ ಪಾಟೀಲ, ಸ್ವರ್ಣ ಕನ್‍ಸ್ಟ್ರಕ್ಷನ್ಸ್ ಮಾಲೀಕ ವೀರಶೆಟ್ಟಿ ಮಣಗೆ, ನಿತಿನ್ ಕರ್ಪೂರ, ಡಾ.ರಿತೇಶ ಸುಲೆಗಾಂವ, ಸಚ್ಚಿದಾನಂದ ಚಿದ್ರೆ, ಸತೀಶ್ ಸ್ವಾಮಿ, ಶಿವಕುಮಾರ ಪಾಟೀಲ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.