ಬಸವಕಲ್ಯಾಣ: ‘ಮಾಜಿ ಶಾಸಕ ಎಂ.ಜಿ.ಮುಳೆ ಅವರು ಸಮಾಜದ ಹಿತಕ್ಕಾಗಿ ಈ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್.ಸಿ.ಪಿ ಯಿಂದ ಸಲ್ಲಿಸಿದ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆದ್ದರಿಂದ ಅವರನ್ನು ಬೆಂಬಲಿಸುತ್ತೇವೆ’ ಎಂದು ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ದಿಗಂಬರರಾವ್ ಮಾನಕರಿ ಹೇಳಿದರು.
ಮಂಗಳವಾರ ಇಲ್ಲಿನ ಮುಳೆ ನಿವಾಸದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಯಲ್ಲಿ ಅವರು ಮಾತನಾಡಿದರು.
‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮರಾಠಾ ಸಮಾಜದ 6 ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರಿಂದ ಮುಳೆ ಅವರು ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಈ ಬಗ್ಗೆ ಯಾರೂ ತಪ್ಪು ತಿಳಿಯಬಾರದು’ ಎಂದು ಕೋರಿದರು.
ಮರಾಠಾ ಕ್ರಾಂತಿ ಮೋರ್ಚಾ ಜಿಲ್ಲಾ ಸಂಯೋಜಕ ವೆಂಕಟೇಶರಾವ್ ಮಾಯಿಂದೆ, ಮುಖಂಡ ಜನಾರ್ದನ್ ಬಿರಾದಾರ, ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಶಿಂಧೆ, ತಾತೇ ರಾವ್ ಪಾಟೀಲ, ರಾವಸಾಬ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.