ADVERTISEMENT

ಬೀದರ್: ಮೈಲಾರ ಮಲ್ಲಣ್ಣ ಜಾತ್ರೆ ಸರಳ ಆಚರಣೆಗೆ ನಿರ್ಧಾರ

ನಾಲ್ಕೂ ಭಾನುವಾರ ಜಾತ್ರೆ ರದ್ದು, ವಸತಿಗೆ ಇಲ್ಲ ಅವಕಾಶ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 13:32 IST
Last Updated 25 ನವೆಂಬರ್ 2021, 13:32 IST
ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿನ ಮಲ್ಲಣ್ಣ ದೇವರ ವಿಗ್ರಹ
ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿನ ಮಲ್ಲಣ್ಣ ದೇವರ ವಿಗ್ರಹ   

ಬೀದರ್: ಕೋವಿಡ್ ಸೋಂಕಿನ ಕಾರಣ ಈ ಬಾರಿಯ ಭಾಲ್ಕಿ ತಾಲ್ಲೂಕಿನ ಖಾನಾಪುರದ ಐತಿಹಾಸಿಕ ಮಲ್ಲಣ್ಣ ದೇವರ ಜಾತ್ರಾ ಮಹೋತ್ಸವ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಜಾತ್ರೆ ಡಿಸೆಂಬರ್ 9 ರಿಂದ 2022ರ ಜನವರಿ 9 ರ ವರೆಗೆ ನಡೆಯಲಿದೆ. ಜಾತ್ರೆಯಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಕೋವಿಡ್ ಸೋಂಕು ತಡೆಗಟ್ಟುವ ದಿಸೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ದೇವಸ್ಥಾನದ ಆಡಳಿತಾಧಿಕಾರಿಯಾದ ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಅವರು ನಾಲ್ಕು ಭಾನುವಾರ ಅಂದರೆ ಡಿ. 12, 19, 26 ಹಾಗೂ ಜನವರಿ 2 ರ ಜಾತ್ರೆಯನ್ನು ರದ್ದುಪಡಿಸಿದ್ದಾರೆ. ಈ ದಿನಗಳಂದು ದೇವಸ್ಥಾನ ಪರಿಸರದಲ್ಲಿ ಭಕ್ತರ ಪ್ರವೇಶ, ಕಾಯಂ ಅಂಗಡಿ, ತಾತ್ಕಾಲಿಕ ಅಂಗಡಿ ತೆರೆಯುವುದನ್ನು ನಿರ್ಬಂಧಿಸಿದ್ದಾರೆ ಎಂದು ಮೈಲಾರ ಮಲ್ಲಣ್ಣ (ಖಂಡೋಬಾ) ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ತಿಳಿಸಿದ್ದಾರೆ.

ADVERTISEMENT

ಭಾನುವಾರ ಹೊರತುಪಡಿಸಿ ಉಳಿದ ದಿನ ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಭಕ್ತರು ದೇವಸ್ಥಾನದಲ್ಲಿ ದೇವರ ದರ್ಶನ ಪಡೆಯಬಹುದು. ಆದರೆ, ವಸತಿಗೆ ಅವಕಾಶ ಇಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.