ADVERTISEMENT

ಬೀದರ್ ಜಿಲ್ಲೆಯಲ್ಲಿ ಉದ್ಯಮ ಸ್ಥಾಪನೆಗೆ ಸಚಿವರ ಆಹ್ವಾನ

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 7:30 IST
Last Updated 30 ಜನವರಿ 2020, 7:30 IST
ಹೈದರಾಬಾದ್‌ನ ಅಲ್‌ಪ್ಲಾ ಪ್ಯಾಕೇಜಿಂಗ್ ಕಂಪನಿಯ ವಿಭಾಗಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಭೇಟಿ ನೀಡಿದರು
ಹೈದರಾಬಾದ್‌ನ ಅಲ್‌ಪ್ಲಾ ಪ್ಯಾಕೇಜಿಂಗ್ ಕಂಪನಿಯ ವಿಭಾಗಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಭೇಟಿ ನೀಡಿದರು   

ಬೀದರ್: ಬೀದರ್ ಜಿಲ್ಲೆಯಲ್ಲಿ ಉದ್ಯಮ ಸ್ಥಾಪಿಸಲು ವಿವಿಧ ಕೈಗಾರಿಕೆಗಳ ಉದ್ಯಮಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಆಹ್ವಾನ ನೀಡಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರೊಂದಿಗೆ ಬುಧವಾರ ಹೈದರಾಬಾದ್‌ನ ಅಲ್‌ಪ್ಲಾ ಪ್ಯಾಕೇಜಿಂಗ್ ಕಂಪನಿಗೆ ಭೇಟಿ ನೀಡಿದ ನಂತರ ಇನ್ವೆಸ್ಟ್ ಕರ್ನಾಟಕ ಯೋಜನೆಯಡಿ ಉದ್ಯಮ ಸ್ಥಾಪನೆಗೆ ಆಹ್ವಾನ ನೀಡಿದರು.

ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಪೂರಕ ವಾತಾವರಣ ಇದೆ. ಉತ್ತಮ ರೈಲು ಸಂಪರ್ಕ ಇದೆ. ಕೆಲವೇ ದಿನಗಳಲ್ಲಿ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ಕೂಡ ಆರಂಭವಾಗಲಿದೆ ಎಂದು ತಿಳಿಸಿದರು.

ADVERTISEMENT

ನಾಲ್ಕಾರು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು ಬೀದರ್ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವ ಭರವಸೆ ನೀಡಿದರು. ಸಂಸದ ಭಗವಂತ ಖೂಬಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.