ADVERTISEMENT

ಒಲಿಂಪಿಕ್ಸ್ ಕ್ರೀಡಾಪಟುಗಳನ್ನು ರೂಪಿಸಲು ಸರ್ಕಾರ ಬದ್ಧ: ಸಚಿವ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 5:52 IST
Last Updated 26 ಫೆಬ್ರುವರಿ 2026, 5:52 IST
<div class="paragraphs"><p>ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದಲ್ಲಿ ಅಂತರರಾಷ್ಟ್ರೀಯ ಕಿಕ್‍ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದ ನಿಶಿಕಾಂತ್, ಪರ್ವೇಜ್, ತರಬೇತುದಾರ ಸುವಿತ್ ಮೊರೆ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಂಸದ ಸಾಗರ್ ಖಂಡ್ರೆ ಸನ್ಮಾನಿಸಿದರು</p></div>

ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದಲ್ಲಿ ಅಂತರರಾಷ್ಟ್ರೀಯ ಕಿಕ್‍ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದ ನಿಶಿಕಾಂತ್, ಪರ್ವೇಜ್, ತರಬೇತುದಾರ ಸುವಿತ್ ಮೊರೆ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಂಸದ ಸಾಗರ್ ಖಂಡ್ರೆ ಸನ್ಮಾನಿಸಿದರು

   

ಭಾಲ್ಕಿ: ಅಂತರರಾಷ್ಟ್ರೀಯ ಮಟ್ಟದ ಕಿಕ್‍ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದ ಬೀದರ್ ಜಿಲ್ಲೆಯ ನಿಶಿಕಾಂತ್ ರಾಜಶೇಖರ ಸಾವಳಗಿ (ಚಿನ್ನದ ಪದಕ), ಪರ್ವೇಜ್ (ಬೆಳ್ಳಿ ಪದಕ ) ಮತ್ತು ತರಬೇತುದಾರ ಸುವಿತ್ ಮೊರೆ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಂಸದ ಸಾಗರ್ ಖಂಡ್ರೆ ತಮ್ಮ ನಿವಾಸದಲ್ಲಿ ಸನ್ಮಾನಿಸಿದರು.

ನಂತರ ಮಾತನಾಡಿದ ಸಚಿವ ಖಂಡ್ರೆ, ‘ನಮ್ಮ ಭಾಗದ ಯುವಕರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವ ಮೂಲಕ ಜಿಲ್ಲೆ ಮತ್ತು ರಾಜ್ಯದ ಹೆಸರನ್ನು ಜಾಗತಿಕ ಮಟ್ಟದಲ್ಲಿ ಬೆಳಗುತ್ತಿರುವುದು ಹೆಮ್ಮೆಯ ವಿಷಯ. ​ ಯುವಜನತೆ ಕಿಕ್‍ ಬಾಕ್ಸಿಂಗ್‍ನಲ್ಲಿ ಹೆಚ್ಚಿನ ಆಸಕ್ತಿ ವಹಿಸಿ, ಸಕ್ರಿಯವಾಗಿ ಪಾಲ್ಗೊಳ್ಳಲು ಪೂರಕ ವಾತಾವರಣ  ನಿರ್ಮಿಸಲಾಗುವುದು’ ಎಂದರು.

ADVERTISEMENT

‘ಯುವಕರು ಕೇವಲ ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲದೆ, ಒಲಿಂಪಿಕ್ಸ್ ಮಟ್ಟದವರೆಗೂ ತಲುಪಲು ಅಗತ್ಯ ಆಧುನಿಕ ತರಬೇತಿ ಕೇಂದ್ರ ಹಾಗೂ ಸರ್ಕಾರದ ವತಿಯಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಸಂಸದ ಸಾಗರ್ ಖಂಡ್ರೆ ಮಾತನಾಡಿ, ‘​ಯುವಜನತೆ ಇಂತಹ ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.