ADVERTISEMENT

ಭಾಲ್ಕಿ: ಗಾಯಾಳುವಿಗೆ ಸಚಿವ ಖಂಡ್ರೆ ನರೆವು

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 6:04 IST
Last Updated 27 ನವೆಂಬರ್ 2025, 6:04 IST
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು   

ಭಾಲ್ಕಿ: ತಾಲ್ಲೂಕಿನ ಕೋನಮೇಳಕುಂದಾ ಗ್ರಾಮದ ಸಮೀಪ ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ಸಚಿವ ಈಶ್ವರ ಖಂಡ್ರೆ ತಮ್ಮ ಬೆಂಗಾವಲು ವಾಹನದಲ್ಲಿ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾದರು.

ಬೈಕ್ ಸವಾರ ವೆಂಕಟ ಬೀದರ್‌ನಿಂದ ಭಾಲ್ಕಿ ಕಡೆಗೆ ಬರುತ್ತಿದ್ದಾಗ ರಸ್ತೆ ದಾಟುತ್ತಿದ್ದ ಜಿಂಕೆ ಬೈಕ್‌ಗೆ ಅಡ್ಡ ಬಂದ ಪರಿಣಾಮ ರಸ್ತೆ ಪಕ್ಕದಲ್ಲಿ ಬಿದ್ದು ಗಾಯಗೊಂಡಿದ್ದ. ಇದೇ ಮಾರ್ಗದಲ್ಲಿ ಭಾಲ್ಕಿ ಕಡೆಗೆ ಬರುತ್ತಿದ್ದ ಸಚಿವ ಈಶ್ವರ ಖಂಡ್ರೆ ತಮ್ಮ ವಾಹನವನ್ನು ನಿಲ್ಲಿಸಿ, ಗಾಯಾಳುವಿಗೆ ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಮ್ಮ ಸಿಬ್ಬಂದಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT