ಬೀದರ್: ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಅವರು ಜೂನ್ 15ರಂದು ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಅವರು ಮಧ್ಯಾಹ್ನ 1.30 ಗಂಟೆಗೆ ಹುಮನಾಬಾದ್ ತಾಲ್ಲೂಕಿನ ದುಬಲಗುಂಡಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.30 ಗಂಟೆಗೆ ಬಸವಕಲ್ಯಾಣ ತಾಲ್ಲೂಕಿನ ಹಿರನಾಗಾಂವ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಬೀದರ್ ತಾಲ್ಲೂಕಿನ ಸಂಶೇರನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ವಿಶೇಷ ಕರ್ತವ್ಯಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.