ADVERTISEMENT

ಸಚಿವ ಪ್ರಭು ಚವ್ಹಾಣ್‌ಗೆ ಕೋವಿಡ್‌ ಪಾಸಿಟಿವ್‌

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 3:46 IST
Last Updated 10 ಸೆಪ್ಟೆಂಬರ್ 2020, 3:46 IST
ಪ್ರಭು ಚವ್ಹಾಣ್
ಪ್ರಭು ಚವ್ಹಾಣ್   

ಬೀದರ್‌: ಪಶು ಸಂಗೋಪನೆ, ಹಜ್ ಹಾಗೂ ವಕ್ಫ್ ಸಚಿವ ಪ್ರಭು ಚವ್ಹಾಣ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ.

ಸೆಪ್ಟೆಂಬರ್ 8 ರಂದು ಚವ್ಹಾಣ್ ಅವರ ಕಾರು ಚಾಲಕ, ಗನ್ ಮ್ಯಾನ್, ಆಪ್ತ ಸಹಾಯಕರಿಗೆ ಪಾಸಿಟಿವ್ ಬಂದ ಕಾರಣ ಸ್ವಯಂಕ್ವಾರಂಟೈನ್‌ಗೆ ಒಳಗಾಗಿದ್ದರು. ಬುಧವಾರ ಸಚಿವರು ವೈದ್ಯರನ್ನು ಕರೆಯಿಸಿ ಪರೀಕ್ಷೆ ಮಾಡಿಸಿಕೊಂಡು ಗಂಟಲು ದ್ರವ ಮಾದರಿ ಕೊಟ್ಟಿದ್ದರು. ಗುರುವಾರ ವರದಿ ಪಾಸಿಟಿವ್‌ ಬಂದಿದೆ.

ಸಚಿವರ ಸಹೋದರ ಪುತ್ರ ದಿಲೀಪ್ ಚವ್ಹಾಣ್ ಅವರಿಗೂ ಸೋಂಕು ಧೃಢಪಟ್ಟಿದೆ. ಈಚೆಗೆ ಸಚಿವರ ಸಂಪರ್ಕಕ್ಕೆ ಬಂದವರು ಎಚ್ಚರಿಕೆ ವಹಿಸಬೇಕು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ ಕಟ್ಟೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT