ADVERTISEMENT

ಖೂಬಾಗೆ ಸಚಿವ ಸ್ಥಾನ: ಪಾಪನಾಶ ದೇಗುಲದಲ್ಲಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 14:02 IST
Last Updated 8 ಜುಲೈ 2021, 14:02 IST
ಸಂಸದ ಭಗವಂತ ಖೂಬಾ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಲಭಿಸಿದ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೀದರ್‌ನ ಪಾಪನಾಶ ಮಂದಿರದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು
ಸಂಸದ ಭಗವಂತ ಖೂಬಾ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಲಭಿಸಿದ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೀದರ್‌ನ ಪಾಪನಾಶ ಮಂದಿರದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು   

ಬೀದರ್: ಸಂಸದ ಭಗವಂತ ಖೂಬಾ ಅವರಿಗೆ ಕೇಂದ್ರ ಸಚಿವ ಸ್ಥಾನ ದೊರೆತ ಕಾರಣ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುರುವಾರ ಇಲ್ಲಿಯ ಪಾಪನಾಶ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ದೇವರಿಗೆ ಆರತಿ ಬೆಳಗಿ, ಹೂವು, ಕಾಯಿ, ಕರ್ಪೂರ ಅರ್ಪಿಸಿ ಭಕ್ತಿ ಸಮರ್ಪಿಸಿದರು. ಭಕ್ತರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಭಗವಂತ ಖೂಬಾ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಬೀದರ್ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದಾರೆ’ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಶೇಕಾಪುರ ಹೇಳಿದರು.

ADVERTISEMENT

‘ಬೀದರ್ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದೆ. ಖೂಬಾ ಅವರಿಂದ ಜಿಲ್ಲೆಗೆ ಅನೇಕ ಹೊಸ ಯೋಜನೆಗಳು ಬರಲಿವೆ. ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾಮ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಸ್ವಾಮಿ, ವೀರೇಶ ಸ್ವಾಮಿ, ಪ್ರಮುಖರಾದ ಅಂಬರೀಷ ಬಟನಾಪುರ, ಸಂತೋಷ ಬಿರಾದಾರ, ಶಿವು ಸುಲ್ತಾನಪುರ, ಸಂಗಮೇಶ ಸ್ವಾಮಿ, ಬಸವರಾಜ ಯರನಳ್ಳಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.