ADVERTISEMENT

ಬಸವಕಲ್ಯಾಣ: ಅಲ್ಪಸಂಖ್ಯಾತರ ವಸತಿ ಶಾಲೆ ಮಂಜೂರು

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 13:35 IST
Last Updated 1 ಜೂನ್ 2025, 13:35 IST
ಬಸವಕಲ್ಯಾಣಕ್ಕೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಧನ್ಯವಾದ ಅರ್ಪಿಸಿದರು
ಬಸವಕಲ್ಯಾಣಕ್ಕೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಧನ್ಯವಾದ ಅರ್ಪಿಸಿದರು   

ಬಸವಕಲ್ಯಾಣ: ನಗರದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದೆ.

ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಲ್ಲಿನ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಮನವಿಗೆ ಸ್ಪಂದಿಸಿ ಈ ಶಾಲೆ ಮಂಜೂರು ಮಾಡಿದ್ದಾರೆ.

‘ನಗರದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಈ ಶಾಲೆ ಆರಂಭಿಸಬೇಕು ಎಂದು ಕೋರಲಾಗಿತ್ತು. ಬಡ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಶಾಲೆ ಮಂಜೂರು ಮಾಡಿದೆ. ಶಾಲೆ ಮಂಜೂರಾತಿಗೆ ಪ್ರಯತ್ನಿಸಿರುವ ವಿಜಯಸಿಂಗ್ ಅವರಿಗೆ ಅನಂತ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಕಾಂಗ್ರೆಸ್ ಪಕ್ಷದ ತಾಲ್ಲೂಕು ಮಾಜಿ ಅಧ್ಯಕ್ಷ ತಹಶೀನಅಲಿ ಜಮಾದಾರ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.