ADVERTISEMENT

ಶಾಸಕರ ಜಗಳ: ಹುಮನಾಬಾದ್ ವೀರಭದ್ರೇಶ್ವರ ಜಾತ್ರೆ ಪೂರ್ವಭಾವಿ ಸಭೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 7:55 IST
Last Updated 6 ಜನವರಿ 2026, 7:55 IST
   

ಹುಮನಾಬಾದ್ (ಬೀದರ್ ಜಿಲ್ಲೆ): ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ಮಂಗಳವಾರ ನಡೆಯಬೇಕಾಗಿದ ಪೂರ್ವ ಸಿದ್ದತಾ ಸಭೆಯನ್ನು ಮುಂದೂಡಲಾಗಿದೆ ಎಂದು ಬಸವಕಲ್ಯಾಣ ಉಪವಿಭಾಗಾಧಿಕಾರಿಯೂ ಆದ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಕುದರೆ ತಿಳಿಸಿದ್ದಾರೆ.

ಪಟ್ಟಣದ ಬಸವರಾಜ ಪಾಟೀಲ್‌ ಕಲ್ಯಾಣ ಮಂಟಪದಲ್ಲಿ ಜಾತ್ರಾ ನಿಮಿತ್ತ ಪೂರ್ವ ಸಿದ್ದತಾ ಸಭೆ ನಿಗದಿಪಡಿಸಲಾಗಿತ್ತು. ಪ್ರತಿ ವರ್ಷ ಜನವರಿ 26ರಂದು ವೀರಭದ್ರೇಶ್ವರ ಜಾತ್ರೆ ನಡೆಯುತ್ತದೆ.

ಬೀದರ್ ನಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ನಿಂದಿಸಿ,‌ ಕೈ ಕೈ ಮಿಲಾಯಿಸಿದ್ದರು. ಇದರಿಂದ ಹುಮನಾಬಾದ್ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಆದಕಾರಣ ಜಾತ್ರಾ ಸಭೆ ಮುಂದೂಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.